"ದೀಪಾವಳಿ ದೀಪಾವಳಿ ಗೋವಿಂದ ಲೀಲಾವಳಿ"

0
902

 
 
ಲೇಖನ: ಭವ್ಯ ಜಿ. ಮಯ್ಯ
 ಆಶ್ವಯುಜ ಕೃಷ್ಣ ಚತುರ್ದಶಿಯಿಂದ ಕಾರ್ತಿಕ ಶುಕ್ಲ ಪಾಡ್ಯಮಿವರೆಗೆ ಸಾಲಂಕೃತವಾಗಿ ಬೆಳಗುವ ದೀಪಗಳು ಆಬಾಲ ವೃದ್ಧರಿಗೂ ಮುದ ನೀಡುವ ದೀಪಾವಳಿ ಹಬ್ಬಗಳಲ್ಲೆಲ್ಲಾ ಅತ್ಯಂತ ಜನಪ್ರಿಯ ಮತ್ತು ಎಲ್ಲರೂ ಆಚರಿಸುವ ದೊಡ್ಡ ಹಬ್ಬ. ಭವಿಷ್ಯೋತ್ತರ ಪುರಾಣ ಕಾಲದಲ್ಲಿ ಈ ಹಬ್ಬ ಪ್ರಸಿದ್ಧವಾಗಿತ್ತು.
 
 
ಅಶ್ವೀಜ ಮಾಸ ಬಹುಳ ತ್ರಯೋದಶಿಯಂದು ದೀಪಾವಳಿ ಪ್ರಾರಂಭವಾಗುತ್ತದೆ. ಇದಕ್ಕೆ ‘ಜಲಪೂರ್ಣ ತ್ರಯೋದಶಿ ಎಂದು ಕರೆಯುತ್ತಾರೆ. ಅಂದು ಸಂಜೆ ಸ್ನಾದ ಕೋಣೆಯನ್ನು ಚೆನ್ನಾಗಿ ಶುದ್ಧಮಾಡಿ ಹಂಡೆಯನ್ನು ಚೆನ್ನಾಗಿ ಕ್ಲೀನ್ ಅದಕ್ಕೆ ಸುಣ್ಣ ಬಳಿದು ಶುದ್ಧವಾದ ನೀರನ್ನು ತುಂಬಿ ನಂತರ ಹಂಡೆಗೆ ಅರಸಿನ ಕೊಡು, ನಾಣ್ಯ, ಅಡಿಕೆ ವೀಳ್ಯದೆಲೆಯನ್ನು ಹಾಕಿ ವಸ್ತ್ರದಿಂದ ಹಂಡೆ ಬಾಯಿಯನ್ನು ಕಟ್ಟುತ್ತಾರೆ.
 
ನರಕ ಚತುರ್ದಶಿ 
 
ದೀಪಾವಳಿ ಮೂರು ದಿನಗಳ ಹಬ್ಬವಾದರೂ, ದ್ವಿತೀಯ ತಿಥಿಯೂ ಸೇರಿದಂತೆ ಅದರ ಅವಧಿ ನಾಲ್ಕು ದಿನ ಆಗುತ್ತದೆ. ಇದೇ ಅಕ್ಟೋಬರ್ 25 ರಂದು ಹಬ್ಬದ ಪ್ರಾರಂಭ.
ನರಕ ಚತುರ್ದಶಿ ಎನಿಸಿರುವ ಆಶ್ವಯುಜ ಕೃಷ್ಣ ಚತುರ್ದಶಿ ಈ ಹಬ್ಬದ ಮೊದಲನೆಯ ದಿನ. ಈ ದಿನ ಮನೆಯವರೆಲ್ಲರೂ ಮುಂಜಾನೆ ಬೇಗ ಎದ್ದು ಹಂಡೆಯಿದ್ದ ಒಲೆ ಬೆಂಕಿ ಹಚ್ಚಿ ನಿರು ಬಿಸಿ ಮಾಡುತ್ತಾರೆ. ನಂತರ ಎಣ್ಣೆ ಸ್ನಾನ ಮಾಡಿ, ಹೊಸ ಬಟ್ಟೆ ತೊಟ್ಟು, ಮನೆಯ ಹಿರಿಯರ ಆರ್ಶೀವಾದ ಪಡೆಯುವುದು ವಾಡಿಕೆ. ಮಹಿಳೆಯರಯ ಮನೆಯಂಗಳ ಸಾರಿಸಿ ರಂಗೋಲಿ ಹಾಕಿ ದೀಪಗಳನ್ನು ಬೆಳಗಿಸುತ್ತಾರೆ. ಅಂದ-ಚೆಂದದ ಆಕಾಶಬುಟ್ಟಿಯನ್ನು ಮನೆಯ ಮುಂಬಾಲಿಗೆ ಇಳಿಬೀಡುತ್ತಾರೆ. ನಂತರ ಉದ್ದು, ಬಿಳಿಯಕ್ಕಿ ಅರಸಿನ ಹಾಕಿ ಮಾಡಿದ ಹಿಟ್ಟಿನ ದೋಸೆ. ಅವಲಕ್ಕಿ ಕಜ್ಜಾಯ ಮಾಡಿ ದೇವರಿಗೆ ಅರ್ಪಿಸಿ ಮನೆಮಂದಿಯರೆಲ್ಲಾ ಸೇವಿಸುತ್ತಾರೆ. ಮತ್ತೆ ಬೆಳಕಿನ ಹಬ್ಬ ಎಂಬಂತೆ ಸಿಡಿಮದ್ದು-ಪಟಾಕಿಗಳನ್ನು ಸಿಡಿಸಿ  ಸಂಭ್ರಮಪಡುತ್ತಾರೆ.
 
 
ಪೌರಾಣಿಕ ಹಿನ್ನೆಲೆ:
ದ್ವಾಪರಯುಗದಲ್ಲಿ ನರಕಾಸುರ ಎಂಬ ರಾಕ್ಷಸನಿದ್ದ. ಆತ 16 ಸಾವಿರ ಹೆಣ್ಣುಮಕ್ಕಳನ್ನು ತನ್ನ ಸೆರೆಯಲ್ಲಿಟ್ಟಿದ್ದನು. ಇವನ ಉಪಟಳ ತಾಲಲಾರದೆ ಇಂದ್ರಾದಿ ದೇವತೆಗಳು ಶ್ರೀಕೃಷ್ಣನ ಮೊರೆ ಹೋಗುತ್ತಾರೆ. ನಂತರ ಶ್ರೀಕೃಷ್ಣ ಅಶ್ವಿಜ ಮಾಸನ ಬಹುಳ ಕೃಷ್ಣಪಕ್ಷ ಚತುರ್ದಶಿಯಂದು ಸಂಹಾರ ಮಾಡಿದನು. ನಂತರ ಸೆರೆಯಲ್ಲಿಟ್ಟಿದ್ದ 16 ಸಾವಿರ ಹೆಣ್ಣುಮಕ್ಕಳನ್ನು ಬಿಡುಗಡೆ ಮಾಡಿದನು. ಸೆರೆಯಾಗಿದ್ದ ತಮ್ಮನ್ನು ಯಾರೂ ವಿವಾಹವಾಗುದಿಲ್ಲವೆಂದ ಕಾರಣ ಶ್ರೀಕೃಷ್ಣನ್ನು ಅವರೆನ್ನೆಲ್ಲಾ ವರಸಿದನು. ನರಕಾಸುರನನ್ನು ವಧಿಸಿದ ರಕ್ತದ ಕೊಳೆಯನ್ನು ತೊಳೆಯಲು ರುಕ್ಮಿಣಿಯು ಶ್ರೀ ಕೃಷ್ಣನಿಗೆ ಎಣ್ಣೆ ನೀರು ಹಚ್ಚಿ ಅಭ್ಯಂಗ ಸ್ನಾನ ಮಾಡಿಸುತ್ತಾಳೆ.ಈ ಕಾರಣ ಅಂದು ಎಣ್ಣೆನೀರು ಸ್ನಾನ ಮಾಡಲಾಗುತ್ತದೆ.
 
 
 
 
 
ಹಬ್ಬದ ಎರಡನೇ ದಿನ ದೀಪಾವಳಿ ಅಮವಾಸ್ಯೆ
2ನೇಯ ದಿನ ದೀಪಾವಳಿ ಅಮವಾಸ್ಯೆ ಅತ್ಯಂತ ಪ್ರಶಸ್ತವಾದ ಶುಭದಿನವಾಗಿದೆ. ಪುರಾಣದ ಪ್ರಕಾರ ಈ ದಿನ ಸಮುದ್ರಮಂಥನ ಮಾಡುವಾಗ ಮಾಹಲಕ್ಷ್ಮಿಯು ಜನಿಸಿದಳು ಎಂಬ ಪ್ರತೀತಿತಿಂದ ವ್ಯಾಪಾರಸ್ಥರು  ತಮ್ಮ ಅಂಗಡಿ-ಮುಂಗಟ್ಟುಗಳಲ್ಲಿ, ಕಛೇರಿಗಳಲ್ಲಿ ಲಕ್ಷ್ಮೀ ಪೂಜೆ ಮಾಡಿ, ಎಲ್ಲರಿಗೂ ಸಿಹಿ ಹಂಚುತ್ತಾರೆ.
 
 
 
 
ಹಬ್ಬದ ಮುರನೇ ದಿನ-ಬಲೀಂದ್ರ, ಗೋ ಪೂಜೆ 
dipavali_go-pooja
 
ಮರುದಿನ ಬಲಿಪಾಡ್ಯಮಿ ಎಂದು ಕರೆಯಲ್ಪಡುವ ಕಾರ್ತಿಕ ಶುಕ್ಲ ಪಾಡ್ಯಮಿ. ಹಿಂದೂ ಪಂಚಾಂಗಗಳಲ್ಲಿ ಅತ್ಯಂತ ಪವಿತ್ರವೆನಿಸಿರುವ ಮೂರೂವರೆ ಮುಹೂರ್ತಗಳಲ್ಲಿ ಅರ್ಧ ದಿವಸದ ಮುಹೂರ್ತ. ಪ್ರಬಲನಾದ ಅಸುರ ಚಕ್ರವರ್ತಿ ಬಲಿಯನ್ನು, ವಿಷ್ಣುವು ವಾಮನಾವತಾರವನ್ನೆತ್ತಿ ಪಾತಾಳಕ್ಕೆ ತುಳಿದದ್ದು ಈ ದಿನದ ಕಥೆ.
 
ತ್ರೇತಾಯುಗದಲ್ಲಿ ಶ್ರೀರಾಮನ ಪಟ್ಟಾಭಿಷೇಕವಾಗಿದ್ದು ಇದೇ ದಿನ. ದ್ವಾಪರಾಯುಗದಲ್ಲಿ ಪಾಂಡವರು ಅಜ್ಞಾತವಾಸ ಮುಗಿಸಿ, ಕೌರವರ ಕಣ್ಣಿಗೆ ಕಾಣಿಸಿಕೊಂಡಿದ್ದು ಈ ದಿನವೇ. ಈ ದಿನ ನೀಡುವ ದಾನ ಅಕ್ಷಯ ಫಲಪ್ರದ ಎನಿಸಿದೆ. ಈ ದಿನವೇ ಪಾರ್ವತಿಯು, ಶಿವನೊಂದಿಗೆ ಪಗಡೆಯಾಟವಾಡಿ, ಶಿವನನ್ನು ಸೋಲಿಸಿದ ದಿನವಾಗಿದೆ.
 
ಬಲಿಪಾಡ್ಯಮಿ ದಿನ ಹಸು, ಎತ್ತುಗಳ ಪೂಜೆ, ಗೋವರ್ಧನ ಬೆಟ್ಟದ ಪೂಜೆ, ಕುಟುಂಬದ ಗಂಡಸರಿಗೆ, ಹೆಂಗಸರು ಮಾರ್ಗ ಪಾಲೀಕಂಕಣ ಕಟ್ಟಿ ಆರತಿ ಮಾಡುವುದು ಈ ದಿವಸದ ಮುಖ್ಯ ಕಾರ್ಯಗಳು. ಈ ದಿವಸ ವಿಕ್ರಮ ಸಂವತ್ಸರದ ಶಕ 2068 ರ ಪ್ರಾರಂಭ ದಿನ. ವಿಕ್ರಮ ಶಕೆಗೂ, ಕ್ರಿಸ್ತ ಶಕಕ್ಕೂ 57 ವರ್ಷಗಳ ವ್ಯತ್ಯಾಸವಿದೆ. ಶಾಲಿವಾಹನ ಶಕೆಗೆ 135 ವರ್ಷಗಳ ವ್ಯತ್ಯಾಸವಿರುತ್ತದೆ. ಈ ದಿವಸ ವ್ಯಾಪಾರ, ಉದ್ಯೋಗ, ಅಭ್ಯಾಸ, ಗೃಹ ಪ್ರವೇಶ, ಶುಭ ಕಾರ್ಯಗಳನ್ನು ಮಾಡಬಹುದು.
 

ಆಚರಣೆ

ಹಿಂದೂ ಧರ್ಮದಜನರು ಪ್ರತಿ ವರ್ಷವೂ ಪ್ರಪಂಚದ ಎಲ್ಲೆಡೆ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆಗಳು, ಸಿಹಿ ತಿಂಡಿಗಳು ಎಲ್ಲಕ್ಕೂ ಹೆಚ್ಚಾಗಿ ಪಟಾಕಿಗಳಿಗೆ ದೀಪಾವಳಿ ಪ್ರಸಿದ್ಧ.ಉತ್ತರಭಾರತದಲ್ಲಿ ದೀಪಾವಳಿಯ ಸಮಯವೇ ಹೊಸ ಆರ್ಥಿಕ ವರ್ಷದ ಪ್ರಾರಂಭ ಸಹ; ಹೊಸ ಲೆಕ್ಕದ ಪುಸ್ತಕಗಳನ್ನು ಈ ಸಮಯದಲ್ಲೇ ತೆರೆಯಲಾಗುತ್ತದೆ.
ದೀಪಾವಳಿಯ ಅಂಗವಾಗಿ ನಡೆಯುವ ಇತರ ಸಮಾರಂಭಗಳಲ್ಲಿ ಆಯುಧಪೂಜೆ ಮತ್ತು ಗೋಪೂಜೆಗಳನ್ನು ಹೆಸರಿಸಬಹುದು. ಪಟಾಕಿಗಳನ್ನು ಸ್ಫೋಟಿಸುವುದು ದೀಪಾವಳಿಯ ಆಚರಣೆಯ ಒಂದು ಭಾಗವಾಗಿದೆ. ಇದು ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಹೊಲ ತೋಟಗಳಲ್ಲಿ ದೀಪದ ಕಂಬವನ್ನು ಆರತಿ ಮಾಡುವುದರ ಮೂಲಕ ಆಚರಿಸುವರು. ಅನೇಕ ಕಡೆಗಳಲ್ಲಿ ದೀಪಾವಳಿಯನ್ನು ಐದು ದಿನಗಳ ಕಾಲ ಆಚರಿಸಲಾಗುತ್ತದೆ.
ದಕ್ಷಿಣ ಭಾರತದಲ್ಲಿ  ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ ಲಕ್ಷ್ಮಿ ಪೂಜೆ ಮುಖ್ಯವಾದದ್ದು. ಜೈನ ಧರ್ಮದಲ್ಲಿ ದೀಪಾವಳಿಯನ್ನು ಕಾರ್ತಿಕ ಮಾಸದ ೩ ದಿನ ಆಚರಿಸುತ್ತಾರೆ.
ಮನೆಯ ದ್ವಾರವನ್ನು ದೀಪದಿಂದ ಬೆಳಗುವುದರ ಜೊತೆಗೆ ಈ ಸಮಯದಲ್ಲಿ ಮಹಾವೀರರ ಉಪದೇಶಗಳನ್ನೊಳಗೊಂಡ ಉತ್ತಾರಾಧ್ಯಾಯನ ಸ್ತೋತ್ರದ ಪಠಣೆ ಮಾಡುತ್ತಾರೆ. ಕೆಲವರು ಮಹಾವೀರರ ನಿರ್ವಾಣ ಸ್ಠಳವಾದ ಬಿಹಾರ ರಾಜ್ಯದ ಪಾವಾಪುರಿಗೆ ಯಾತ್ರೆ ಕೈಗೊಳ್ಳುತ್ತಾರೆ. ವ್ಯಾಪಾರಿಗಳು ಹೊಸ ಲೆಕ್ಕದ ಪುಸ್ತಕಗಳನ್ನು ಪ್ರಾರಂಭಿಸುತ್ತಾರೆ.
 
 
 
 
ಪೌರಾಣಿಕ ಮಹತ್ವಗಳು:
ಶ್ರೀರಾಮ ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ ಆಯೋಧ್ಯೆಗೆ ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ
ಅಮಾವಾಸ್ಯೆಯ ಹಿಂದಿನ ದಿನ (ನರಕ ಚತುರ್ದಶಿ) ಶ್ರೀಕೃಷ್ಣ ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ದೀಪಾವಳಿಯಲ್ಲಿ ಕೇಡಿನ ಮೇಲೆ ಶುಭದ ವಿಜಯವನ್ನು ಆಚರಿಸಲಾಗುತ್ತದೆ.
ದೀಪಾವಳಿಯೊಂದಿಗೆ ಇನ್ನಿತರ ಪುರಾಣಗಳೂ ಸಂಬಂಧಿತವಾಗಿದೆ. ಉದಾಹರಣೆಗೆ, ಬಲಿ-ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರುದಿನ ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತದೆ.
 
ಸಿಖ್ಖ ಧರ್ಮದಲ್ಲಿಯೂ ದೀಪಾವಳಿ ಮುಖ್ಯ ಹಬ್ಬ. 1920 ರಲ್ಲಿ ಸಿಖ್ಖರ ಆರನೆಯ ಗುರು ಹರಗೋಬಿಂದ್ ಸಿಂಗ್ ಗ್ವಾಲಿಯರ್  ಕೋಟೆಯಲ್ಲಿ ಬಂಧಿತರಾಗಿದ್ದ 52 ರಾಜರನ್ನು ಬಿಡಿಸಿ ತಂದ ದಿನವೆಂದು ಈ ಕಾಲವನ್ನು ಆಚರಿಸಲಾಗುತ್ತದೆ.
ದೀಪಾವಳಿಯು ಜೈನ ಧರ್ಮದಲ್ಲಿ ಕಡೆಯ ತೀರ್ಥಂಕರ ಮಹಾವೀರರು ಕಾರ್ತಿಕ ಚತಿರ್ದಶಿಯಂದು (ಕ್ರಿ.ಪೂ 527 ಅಕ್ಟೋಬರ್ 15) ಪಾವಾಪುರಿಯಲ್ಲಿ ಮೋಕ್ಷ ಹೊಂದಿದ ದಿನವಾಗಿ ಆಚರಿಸಲ್ಪಡುತ್ತದೆ.
ಕ್ರಿ.ಪೂ 3ನೇ ಶತಮಾನದಲ್ಲಿ ಆಚಾರ್ಯ ಭದ್ರಬಾಹುವಿನಿಂದ ರಚಿತವಾದ ಕಲ್ಪಶ್ರುತ ಗ್ರಂಥದಲ್ಲಿರುವಂತೆ ಮಹಾವೀರರ ನಿರ್ವಾಣ ಕಾಲದಲ್ಲಿದ್ದ ದೇವತೆಗಳಿಂದ ಅಂಧಕಾರವು ಮರೆಯಾಗಿದ್ದಿತು. ಆದರೆ ಮುಂದಿನ ರಾತ್ರಿ ಗಾಡಾಂಧಕಾರವು ಆವರಿಸಿತು. ತಮ್ಮ ಗುರುವಿನ ಜ್ಜಾನಜ್ಯೋತಿ ಯ ಸಂಕೇತವಗಿ 16 ಗಣ-ಚರ್ಕವರ್ತಿ, 9 ಮಲ್ಲ ಮತ್ತು 9 ಗಣರಾಜ್ಯದಲ್ಲಿ ದ್ವಾರವನ್ನು ಬೆಳಗಿದರು. ಜೈನರಿಗೆ ಇದು ವರ್ಷದ ಪ್ರಾರಂಭ.

LEAVE A REPLY

Please enter your comment!
Please enter your name here