ದೀಪಾವಳಿ ಸ್ಪರ್ಧೆ ವಿಜೇತರು

0
173

ಉಜಿರೆ ಪ್ರತಿನಿಧಿ ವರದಿ
ಎಸ್ಡಿಎಂ ಸ್ನಾತಕೋತ್ತರಕೇಂದ್ರದವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗಾಗಿ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳ ತಂಡ ಪ್ರಥಮ ಬಹುಮಾನ ಗಳಿಸಿದೆ.
 
 
ವಿದ್ಯಾರ್ಥಿಗಳು ನೃತ್ಯ, ಹಾಡು, ರೂಪಕ ಸೇರಿದಂತೆ ವಿವಿಧ ಪ್ರದರ್ಶನ ನೀಡಿದರು.ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದ ವಿದ್ಯಾರ್ಥಿಗಳು ನರಕಾಸುರ ವಧೆ ಪ್ರಸಂಗವನ್ನು ಕೇಂದ್ರೀಕರಿಸಿಕೊಂಡು ರೂಪಕ ನೃತ್ಯವನ್ನು ಪ್ರದರ್ಶಿಸಿದರು.
 
 
ವ್ಯಕ್ತಿತ್ವ ವಿಕಸನದ ಸಂದರ್ಭದಲ್ಲಿ ಮಾನಸಿಕ ದ್ವಂದ್ವಗಳಿಗೆ ಸಿಲುಕದೇ ನಿಶ್ಚಿತ ಪ್ರಜ್ಞೆಯೊಂದಿಗೆ ಮುಂದಡಿಯಿಡಬೇಕು ಎಂಬ ಸಂದೇಶ ಸಾರಿದ ಮನಃಶಾಸ್ತ್ರ ವಿಭಾಗದ ವಿದ್ಯಾರ್ಥಿಗಳ ತಂಡದ ಪ್ರದರ್ಶನಕ್ಕೆ ದ್ವಿತೀಯ ಬಹುಮಾನ ಲಭಿಸಿತು.
 
ದೀಪಾವಳಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಸತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಪ್ರೊ.ಟಿ. ಕೃಷ್ಣಮೂರ್ತಿ ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ಪ್ರಯತ್ನ ಎಲ್ಲರಿಂದ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು. ದೀಪಾವಳಿ ಹಬ್ಬದ ಮಹತ್ವವನ್ನು ವಿವರಿಸಿದರು.
 
 
ದೀಪಾವಳಿಯಂದು ಗೋಪೂಜೆ, ಲಕ್ಷ್ಮೀ ಪೂಜೆಗೆ ವಿಶೇಷವಾದ ಮಹತ್ವವಿದೆ. ಎಲ್ಲರೂ ಪೂಜಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಆಯುಧ ಪೂಜೆ, ಅಂಗಡಿ ಪೂಜೆಯ ಮೂಲಕ ಧನ್ಯತಾಭಾವ ಪಡೆಯುತ್ತಾರೆ ಎಂದರು.
 
ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಎಸ್ ಮೋಹನನಾರಾಯಣ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಸುವೀರ್ ಜೈನ್ ಸ್ವಾಗತಿಸಿದರು. ಎಸ್ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಿ .ಎಮ್.ವೈ ಮಂಜುಳಾ ಪ್ರಾಸ್ತಾವಿಕ ಮಾತುಗಳನ್ನಾಡಿದರು.

LEAVE A REPLY

Please enter your comment!
Please enter your name here