ದುರೈಯಪ್ಪ ಕ್ರೀಡಾಂಗಣ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

0
384

 
ವರದಿ: ಚಂದ್ರಲೇಖ ಭಟ್
ಶ್ರೀಲಂಕಾದ ಉತ್ತರ ಪ್ರಾಂತ್ಯದ ಜಾಫ್ನಾದಲ್ಲಿ ನವೀಕರಣಗೊಂಡ ದುರೈಯಪ್ಪ ಕ್ರೀಡಾಂಗಣವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಜಂಟಿಯಾಗಿ ಲೋಕಾರ್ಪಣೆ ಮಾಡಿದರು.
 
 
ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ದುರೈಯಪ್ಪ ಕ್ರೀಡಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ, ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆಯಲ್ಲಿ ಭಾಗವಹಿಸಿದರು.
 
 
 
ಸಾವಿರದ 850 ಜನರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಕ್ರೀಡಾಂಗಣದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮತ್ತು ಮನರಂಜನಾ ಚಟುವಟಿಕೆಗಳು ನಡೆಯಲಿವೆ. ಶ್ರೀಲಂಕಾದ ಉತ್ತರ ಪ್ರಾಂತ್ಯದ ಯುವಜನತೆ ಅಭಿವೃದ್ಧಿಗೆ ಕ್ರೀಡಾಂಗಣ ನೆರವಾಗಲಿದೆ ಎನ್ನಲಾಗಿದೆ.
 
 
 
ಜಾಫ್ನಾದ ಮಾಜಿ ಮೇಯರ್ ದಿವಂಗತ ಆಲ್ಫ್ರೆಡ್ ತಂಬಿರಾಜ ದುರೈಯಪ್ಪ ಅವರ ಹೆಸರನ್ನು ಕ್ರೀಡಾಂಗಣಕ್ಕೆ ಇಡಲಾಗಿದ್ದು, 7 ಕೋಟಿ ರೂಪಾಯಿ ವೆಚ್ಚದಲ್ಲಿ ಭಾರತ ಇದನ್ನು ನವೀಕರಣಗೊಳಿಸಿದೆ.

LEAVE A REPLY

Please enter your comment!
Please enter your name here