ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ, ನಾಳೆಯಿಂದ

0
546

 
ವರದಿ: ಸುನೀಲ್ ಬೇಕಲ್
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರುಗಡೆ ಇರುವ ಪ್ರವಚನ ಮಂಟಪದಲ್ಲಿ ಇದೇ ಜುಲೈ 17ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ 6.30 ರಿಂದ 8ರ ವರೆಗೆ ಪುರಾಣ ವಾಚನ-ಪ್ರವಚನ ಹಮ್ಮಿಕೊಳ್ಳಲಾಗಿದೆ.
 
ಈ ಬಾರಿ ಶ್ರೀ ಮಾರ್ಕಂಡೇಯ ಪುರಾಣ ವಾಚನ-ಪ್ರವಚನವನ್ನು ಊರ – ಪರಊರ ವಿದ್ವಾಂಸರು ನಡೆಸಿಕೊಡಲಿದ್ದಾರೆ.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ರವರ ಉಪಸ್ಥಿತಿಯಲ್ಲಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಯವರು ಭಾನುವಾರ ಸಂಜೆ 6 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಪುರಾಣ ವಾಚನ – ಪ್ರವಚನ ಸಮಿತಿಯ ಸಂಚಾಲಕ ಎ. ವಿ. ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here