ಕ್ರೀಡೆವಾರ್ತೆ

ಧವನ್ ಸ್ಥಾನಕ್ಕೆ ನಾಯರ್ ಆಯ್ಕೆ

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದ ಆರಂಭಿಕ ಆಟಗಾರನಾಗಿ ಶಿಖರ್ ದವನ್ ಬದಲಿಗೆ ಕರುಣ್ ನಾಯರ್ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ.
 
 
 
ಮೂರನೇ ಟೆಸ್ಟ್ ಪಂದ್ಯಕ್ಕೆ ಶಿಖರ್ ಧವನ್ ಅಲಭ್ಯರಾಗಿದ್ದಾರೆ. ಇದರಿಂದ ಶಿಖರ್ ಅವರ ಸ್ಥಾನಕ್ಕೆ ಯುವ ಬ್ಯಾಟ್ಸ್ ಮನ್ ಕರುಣ್ ನಾಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಅಜಯ್ ಶಿರ್ಕೆ ಅಕ್ಟೋಬರ್ 3ರಂದು ಪ್ರಕಟಿಸಿದರು.
 
 
 
ಭಾನುವಾರದಂದು ಟ್ರೆಂಟ್ ಬೌಲ್ಟ್ ಅವರ ಎಸೆತವನ್ನು ಎದುರಿಸುವಾಗ ಧವನ್ ಅವರು ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಧವನ್ ಅವರಿಗೆ 15 ದಿನಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ಬಿಸಿಸಿಐ ತಿಳಿಸಿದೆ. ಕೆಎಲ್ ರಾಹುಲ್ ನಂತರ ಶಿಖರ್ ಧವನ್ ಅವರು ಕೂಡಾ ಗಾಯಾಳುವಾಗಿ ಪಂದ್ಯದಿಂದ ಹೊರ ಬಿದ್ದಿದ್ದಾರೆ.
 
 
ಅ.8ಕ್ಕೆ 3ನೇ ಟೆಸ್ಟ್
ಶನಿವಾರ (ಅಕ್ಟೋಬರ್ 8)ರಂದು ಇಂದೋರ್ ನಲ್ಲಿ ಮೂರನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 178 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ.
ಗೆಲ್ಲಲು 376 ರನ್ ಗಳ ಬೃಹತ್ ಮೊತ್ತ ಪಡೆದಿದ್ದ ನ್ಯೂಜಿಲೆಂಡ್ ದ್ವಿತೀಯ ಇನ್ನಿಂಗ್ಸ್ ನಲ್ಲಿ 197 ರನ್ ಗಳಿಗೆ ಆಲೌಟ್ ಆಗಿ ಟೀಂ ಇಂಡಿಯಾಗೆ ಶರಣಾಗಿದೆ. ಇದರಿಂದ ಭಾರತ 2-0ರ ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಂಡಿದೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here