ನಾಯಕತ್ವಕ್ಕೆ ಗುಡ್ ಬೈ ಹೇಳಿದ ಧೋನಿ

0
456

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಏಕದಿನ ಹಾಗೂ ಟಿ-20 ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ನಾಯಕತ್ವಕ್ಕೆ ವಿದಾಯ ಹೇಳಿದ್ದಾರೆ. ಇದರಿಂದ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಧೋನಿ ಈ ನಿರ್ಧಾರ ಕೈಗೊಂಡು ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
 
 
ಏಕದಿನ ಅಂತಾರಾಷ್ಟ್ರೀಯ ತಂಡ ಹಾಗೂ ಟ್ವೆಂಟಿ20 ತಂಡಕ್ಕೆ ಧೋನಿ ನಾಯಕರಾಗಿದ್ದರು.ಈಗ ನಾಯಕತ್ವ ತೊರೆದರೂ ಆಟಗಾರನಾಗಿ ತಂಡದಲ್ಲಿ ಮುಂದುವರೆಯಲಿದ್ದಾರೆ.
 
 
 
2007ರಲ್ಲಿ ವಿಶ್ವ ಟ್ವೆಂಟಿ20, 2011ರಲ್ಲಿ ವಿಶ್ವಕಪ್ ಹಾಗೂ 2013ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದರು. 2014ರಲ್ಲಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಪಡೆದ ಧೋನಿ ಅವರು 2007ರಿಂದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದಾರೆ.
 
 
 
26, 2014 ರಂದು ಟೆಸ್ಟ್ ನಾಯಕತ್ವ ಸ್ಥಾನಕ್ಕೆ ನಿವೃತ್ತಿ ಘೋಷಿಸಿದ್ದರು. 2004 ಡಿಸೆಂಬರ್ 23 ರಂದು ಬಾಂಗ್ಲಾದೇಶದ ವಿರುದ್ಧದ ಒಂದು ದಿನದ ಅಂತರ ರಾಷ್ಟ್ರೀಯ ಪಂದ್ಯದಲ್ಲಿ ಮೊದಲ ಬಾರಿಗೆ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದ ಅವರು 2016ರ ಅಕ್ಟೋಬರ್ 23ರಂದು ನ್ಯೂಜಿಲ್ಯಾಂಡ್ ವಿರುದ್ಧ ಆಡಿದ್ದ ಪಂದ್ಯವೇ ನಾಯಕನಾಗಿ ಅವರ ವೃತ್ತಿ ಜೀವನದ ಕೊನೆಯ ಪಂದ್ಯವಾದಂತಾಗಿದೆ. ಧೋನಿ ನಾಯಕತ್ವದಲ್ಲಿ ಭಾರತ ತಂಡ 2011 ರ ಏಕದಿನದ ವಿಶ್ವ ಕಪ್, 2007ರ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು.

LEAVE A REPLY

Please enter your comment!
Please enter your name here