ನಿರ್ಗತಿಕರಿಗೆ ರಾತ್ರಿ ಆಹಾರ ಭಾಗ್ಯ!

0
282

 
ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯದಲ್ಲಿ 15 ಲಕ್ಷ ಪಡಿತರ ಚೀಟಿ ಅರ್ಜಿ ವಿತರಣೆ ಬಾಕಿಯಿದೆ ಎಂದು ಆಹರಾ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
 
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 1.80 ಲಕ್ಷ ಅರ್ಜಿ ಬೆಳಗಾವಿ ಜಿಲ್ಲೆಯಲ್ಲೇ ಬಾಕಿ ಉಳಿದಿದೆ. ಮುಂದಿನ ದಿನಗಳಲ್ಲಿ ಪಡಿತರದ ಜತೆ ಪ್ರೋಟಿನ್ ಆಹಾರ ನೀಡಲಾಗುತ್ತದೆ. ಹಾಗೆಯೇ ಅನ್ ಲೈನ್ ಮೂಲಕ ಎಪಿಎಲ್ ಕಾರ್ಡ್ ಯೋಜನೆ ಜಾರಿ ಮಾಡಲಾಗುವುದು.
 
 
ನಿರ್ಗತಿಕರಿಗೆ ರಾತ್ರಿ ಆಹಾರದ ವ್ಯವಸ್ಥೆ ಮಾಡಲಾಗುವುದು. ಆಹಾರ ಇಲಾಖೆ ಮೂಲಕ ಆಹಾರದ ವ್ಯವಸ್ಥೆಗೆ ಚಿಂತನೆ ಮಾಡಲಾಗುತ್ತದೆ. ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಮಲಗಬಾರದು. ಇದು ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿದೆ. ನಗರ ಪ್ರದೇಶದಲ್ಲಿ ನಿರ್ಗತಿಕರಿಗೆ ಊಟ ನೀಡುವ ಯೋಜನೆ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.
 
 
ಎಪಿಎಲ್ ಕಾರ್ಡ್ ಗೆ ನಿಗದಿಯಾದ ಮಾನದಂಡ ಸರಳೀಕರಣ ನಿರ್ಧಾರ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಎಪಿಎಲ್ ಕಾರ್ಡ್ ಗಿರುವ 14 ಮಾನದಂಡ ಅವೈಜ್ಞಾನಿಕವಾಗಿದೆ. ಇದನ್ನು ತೆಗೆದು ಹಾಕಿ ನೇರವಾಗಿ ಬಿಪಿಎಲ್ ಕಾರ್ಡ್ ನೀಡಲಾಗುವುದು.

LEAVE A REPLY

Please enter your comment!
Please enter your name here