ನಿರ್ಣಾಯಕ ದಿನ…ಎಲ್ಲರಲ್ಲೂ ಕುತೂಹಲ

0
154

ನಮ್ಮ ಪ್ರತಿನಿಧಿ ವರದಿ
 ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಇಂದು ನಿರ್ಣಾಯಕ ದಿನವೆಂದರೆ ತಪ್ಪಲ್ಲ.   ದೆಹಲಿಯಲ್ಲಿ ಇಂದು ಕಾವೇರಿ ಮೇಲುಸ್ತುವಾರಿ ಸಮಿತಿಯ ಮಹತ್ವದ ಸಭೆ ನಡೆಯಲಿದ್ದು, ಸಮರ್ಥ ವಾದ ಮಂಡನೆಗೆ ಸರ್ಕಾರ ಸಿದ್ಧತೆ ನಡೆಸಿದೆ. ಇತ್ತ ಕಾವೇರಿ ಕೊಳ್ಳದ ಭಾಗದ ರೈತರಲ್ಲಿ ಆತಂಕ ಮಡುಗಟ್ಟಿದ್ದು, ಮಂಡ್ಯ ಸೇರಿದೆಂತೆ ಹಲವೆಡೆ ಪರಿಸ್ಥಿತಿ ಸೂಕ್ಷ್ಮವಾಗಿದೆ. ಇಂದು ತಮಿಳು ನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ದೆಹಲಿಯಲ್ಲಿ ಇಂದು ಜಲ ಸಂನ್ಮೂಲ ಸಚಿವ ಎಂ. ಬಿ ಪಾಟೀಲ್ ನೇತೃತ್ವದಲ್ಲಿ ಸಭೆ ಸೇರಲಿದೆ.ದೆಹಲಿಯ ಕರ್ನಾಟಕ ಭವನದಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕದ ಜಲ ಸಂಪನ್ನೂಲ ಕಾರ್ಯದರ್ಶಿ ರಾಕೇಶ್ ಸಿಂಗ್ ಮೊದಲಾದವರು ಭಾಗವಹಿಸುತ್ತಿದ್ದಾರೆ. ಇದೀಗ  ಎಲ್ಲರ ದೃಷ್ಠಿ ಸಮಿತಿಯತ್ತ ನೆಟ್ಟಿದೆ.
ತಮಿಳುನಾಡಿಗೆ ನೀರು ಬಿಟ್ಟು ರಾಜ್ಯದ ಜನರ ಕೆಂಗೆಣ್ಣಿಗೆ ಗುರಿಯಾಗಿರೋ ಸರ್ಕಾರ, ಈಗ ನೀರು ಬಿಡುವುದಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದೆ.
ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ಅವರು ಅಧಿಕಾರಿಗಳ ತಂಡದೊಂದಿಗೆ ದೆಹಲಿಯಲ್ಲೇ ಉಳಿದುಕೊಂಡಿದ್ದು, ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಮುಗಿಯುವವರೆಗೆ ದೆಹಲಿಯಲ್ಲಿ ಇರುವ ಸಾಧ್ಯತೆ ಹೆಚ್ಚಾಗಿದೆ.

LEAVE A REPLY

Please enter your comment!
Please enter your name here