ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್‌ ಅಸ್ವಸ್ಥ

0
5129

ಬೆಂಗಳೂರು ಸಿನಿ ಪ್ರತಿನಿಧಿ ವರದಿ
update news: ಪಾರ್ವತಮ್ಮ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ ಎಂದು ಎಂ.ಎಸ್ ರಾಮಯ್ಯ ಆಸ್ಪತ್ರೆ ವೈದ್ಯ ಡಾ. ಸಂಜಯ್ ಕುಲಕರ್ಣಿ ತಿಳಿಸಿದ್ದಾರೆ.
 
 
 
ದಿವಂಗತ ಡಾ.ರಾಜ್‌ಕುಮಾರ್ ರವರ ಧರ್ಮಪತ್ನಿ ಮತ್ತು ಖ್ಯಾತ ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್‌ ಅವರು ತೀವ್ರ ಅಸ್ವಸ್ಥರಾಗಿದ್ದಾರೆ. ತೀವ್ರ ಅಸ್ವಸ್ಥರಾದ ಅವರನ್ನು ಬುಧವಾರ ನಸುಕಿನ 1 ಗಂಟೆಯ ವೇಳೆ ಅವರನ್ನು ಎಂ.ಎಸ್‌.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
 
 
ರಕ್ತದ ಒತ್ತಡ ಕಡಿಮೆಯಾಗಿ,ಶುಗರ್‌ ಹೆಚ್ಚಾದ ಕಾರಣ ತೀವ್ರ ಅಸ್ವಸ್ಥರಾಗಿದ್ದರು. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಪುತ್ರರಾದ ರಾಘವೇಂದ್ರ ರಾಜ್‌ಕುಮಾರ್‌, ಶಿವರಾಜ್‌ಕುಮಾರ್‌ ಮತ್ತು ಪುನೀತ್‌ ರಾಜ್‌ಕುಮಾರ್‌ ಅವರು ಆಸ್ಪತ್ರೆಗೆ ಆಗಮಿಸಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ.

LEAVE A REPLY

Please enter your comment!
Please enter your name here