ನಿಲ್ಲದ ಪಾಕ್ ಪುಂಡಾಟಿಕೆ

0
162

ರಾಷ್ಟ್ರೀಯ ಪ್ರತಿನಿಧಿ ವರದಿ
ಪಾಕಿಸ್ತಾನದಿಂದ ಮತ್ತೆ ಮತ್ತೆ ಕದನ ವಿರಾಮ ಉಲ್ಲಂಘನೆಯಾಗುತ್ತಿದೆ. ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ ಮುಂದುವರಿದಿದೆ.
 
 
ಜಮ್ಮ-ಕಾಶ್ಮೀರದ ಗಡಿಭಾಗದಲ್ಲಿ ಗುಂಡಿನ ಚಕಮಕಿ ನಡೆದಿದೆ. ಆರ್ನಿಯಾ, ಸಾಂಬಾ, ರಾಜೌರಿಯಲ್ಲಿ ನಿರಂತರ ಫೈರಿಂಗ್ ನಡೆದಿದೆ. ಪಾಕ್ ಗುಂಡಿನ ದಾಳಿಗೆ ಇಬ್ಬರು ನಾಗರಿಕರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಯುವತಿ ಸಾವನ್ನಪ್ಪಿದ್ದಾಳೆ.
 
ಪಾಕ್ ಪುಂಡಾಟಕ್ಕೆ ಭಾರತೀಯ ಸೇನೆ ದಿಟ್ಟ ಪ್ರತ್ಯುತ್ತರ ನೀಡಿದೆ. ಗಡಿಯಲ್ಲಿರುವ ನಾಗರೀಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿಯನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here