ನಿಷೇಧಾಜ್ಞೆ

0
246

ನಮ್ಮ ಪ್ರತಿನಿಧಿ ವರದಿ
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಇಂದು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ.
 
 
 
ಬೆಳಗ್ಗೆ 6 ಗಂಟೆಯಿಂದ ಸಂಜೆ 6ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹಾಕಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. 14 ಅರೆಸೇನಾ ಪಡೆ, 40 ಕೆಎಸ್ ಆರ್ ಪಿ ಮತ್ತು ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.
ಮಂಡ್ಯ ಜಿಲ್ಲೆಯಲ್ಲೂ ಬಿಗಿಭದ್ರತೆ ಮಾಡಲಾಗಿದೆ. ಜಿಲ್ಲೆಯಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದೆ. ಶ್ರೀರಂಗಪಟ್ಟಣ ಸೇರಿ 5 ತಾಲೂಕುಗಳಲ್ಲಿ ನಿಷೇಧಾಜ್ಞೆಯನ್ನು ಹಾಕಲಾಗಿದೆ.
 
 
ಗಡಿಯಲ್ಲಿ ಟೈಟ್ ಸೆಕ್ಯೂರಿಟಿ
ಅತ್ತಿಬೆಲೆ ಗಡಭಾಗದಲ್ಲೂ ಟೈಟ್ ಪೊಲೀಸ್ ಸೆಕ್ಯೂರಿಟಿ ಮಾಡಲಾಗಿದೆ. ಎರಡೂ ರಾಜ್ಯಗಳ ಪೊಲೀಸರು ಗಡಿಭಾಗದಲ್ಲಿ ಬಿಗಿ ಭದ್ರತೆ ಮಾಡಿದ್ದಾರೆ. 100 ಕೆಎಸ್ ಆರ್ ಪಿ, 100 ಬಿಎಸ್ ಎಫ್ ಸಿಬ್ಬಂದಿಯ ಭದ್ರತೆ, ಗಡಿಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ, ಬಸ್ ಗಳಿಗೆ ಪ್ರವೇಶವಿಲ್ಲ.

LEAVE A REPLY

Please enter your comment!
Please enter your name here