ನ್ಯಾ.ಪಿ.ವಿಶ್ವನಾಥ ಶೆಟ್ಟಿ ಮುಂದಿನ ಲೋಕಾಯುಕ್ತ

0
404

ಬೆಂಗಳೂರು ಪ್ರತಿನಿಧಿ ವರದಿ
ಲೋಕಾಯುಕ್ತ ಹುದ್ದೆಗೆ ನ್ಯಾ.ಪಿ.ವಿಶ್ವನಾಥ ಶೆಟ್ಟಿಯವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.
 
 
 
ಬೆಂಗಳೂರಿನ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ನಡೆದ ಉನ್ನತಾಧಿಕಾರದ ಆಯ್ಕೆ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಒಮ್ಮತದಿಂದ ನ್ಯಾ.ಪಿ.ವಿಶ್ವನಾಥ ಶೆಟ್ಟಿಯವರ ಹೆಸರನ್ನು ಅಂತಿಮಗೊಳಿಸಲಾಯಿತು. ರಾಜ್ಯಸರ್ಕಾರ ಅಂತಿಮ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಲಿದೆ.
 
 
 
ಕರ್ನಾಟಕ ಬಾರ್ ಕೌನ್ಸಿಲ್ ಅಧ್ಯಕ್ಷರಾಗಿದ್ದ ನ್ಯಾ.ಪಿ.ವಿಶ್ವನಾಥ ಶೆಟ್ಟಿಯವರು 1995ರಲ್ಲಿ ಕರ್ನಾಟಕ ಹೈಕೋರ್ಟ್ ಜಡ್ಜ್ ಆಗಿ ನೇಮಕಗೊಂಡಿದ್ದರು. ಇವರು ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಮೊದಲ ಅಧ್ಯಕ್ಷರಾಗಿದ್ದರು. ಕರ್ನಾಟಕ ರಾಜ್ಯ ಲೀಗಲ್ ಸರ್ವೀಸ್ ಪ್ರಾಧಿಕಾರದ ಛೇರ್ಮೆನ್ ಆಗಿದ್ದರು.
 
 
 
ನ್ಯಾ.ಎನ್.ಕೆ ಪಾಟೀಲ್, ನ್ಯಾಯಮೂರ್ತಿ ಆನಂದ್ ಬೈರಾರೆಡ್ಡಿ ಮತ್ತು ನ್ಯಾ.ಪಿ.ವಿಶ್ವನಾಥ ಶೆಟ್ಟಿಯವರ ಹೆಸರುಗಳನ್ನು ಪ್ರಸ್ತಾಪವಾಗಿದ್ದವು.

LEAVE A REPLY

Please enter your comment!
Please enter your name here