ಪಂಚಾಯತ್ ವ್ಯವಸ್ಥೆಯಲ್ಲಿ ಜನರ ಸಕ್ರಿಯೆ ಭಾಗವಹಿಸುವಿಕೆ ಅತೀ ಅಗತ್ಯ

0
420

ವರದಿ: ಜಯ ಕುಮಾರ್ ಶೆಟ್ಟಿ
ಗ್ರಾಮ ಪಂಚಾಯತ್ ವ್ಯವಸ್ಥೆಯಲ್ಲಿ ಪೌರ ಪ್ರಜ್ಞೆ ಹಾಗೂ ಜನರ ಸಕ್ರಿಯೆ ಭಾಗವಹಿಸುವಿಕೆ ಅತೀ ಅಗತ್ಯ. ಈ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಪ್ರಜ್ಞಾವಂತ ಯುವಜನರು ಕ್ರಿಯಾಶೀಲರಾಗಿ ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಶ್ರೀ.ಧ.ಮಂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಬಿ.ಕೆ ಅವರು ಕರೆ ನೀಡಿದರು.
 
 
 
ಶ್ರೀ ಉದಯ ಬಿ.ಕೆ ಅವರು ಉಜಿರೆಯ ಶ್ರೀ ಧ ಮಂ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿ ವೇದಿಕೆ ಅರ್ಥಾಂಕಣವು ಗ್ರಾಮ ಪಂಚಾಯತ್ ಹಾಗೂ ಅಭಿವೃದ್ದಿ ಎಂಬ ವಿಷಯದ ಬಗ್ಗೆ ಆಯೋಜಿಸಿದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.
 
 
 
ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮಹೇಶ್ ಕುಮಾರ್ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ನನಸಾಗಬೇಕಾದರೆ ಪಂಚಾಯತ್ ವ್ಯವಸ್ಥೆಯ ಬಗ್ಗೆ ಜನಸಾಮಾನ್ಯರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು.
ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಶಿವಕುಮಾರ್ ಅವರು ಕರ್ನಾಟಕದಲ್ಲಿ ಪಂಚಾಯತ್ ವ್ಯವಸ್ಥೆಯ ರಚನೆ ಹಾಗೂ ಕಾರ್ಯವೈಖರಿಯ ಬಗ್ಗೆ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕಿ ವಸಂತಿ ಅವರು ಉಪಸ್ಥಿತರಿದ್ದರು.
 
 
ದ್ವಿತೀಯ ಪದವಿ ವಿದ್ಯಾರ್ಥಿ ಹನುಮಂತಪ್ಪ ನಿರ್ವಹಿಸಿದ ಕಾರ್ಯಕ್ರಮದ ಕೊನೆಗೆ ಕು.ಮಹಿಮಾ ವಂದಿಸಿದರು. ಕಾರ್ಯಕ್ರಮದ ಕೊನೆಗೆ ದ್ವಿತೀಪ ಪದವಿ ವಿದ್ಯಾರ್ಥಿ ಕಿಶೋರ್ ಕುಮಾರ್ ಮರ್ಗದರ್ಶನದಲ್ಲಿ ವಿದ್ಯಾರ್ಥಿಗಳ ತಂಡ ಗ್ರಾಮ ಸಭೆಯ ಮಹತ್ವವನ್ನು ತಿಳಿ ಹೇಳುವ ನಾಟಕವನ್ನು ಪ್ರದರ್ಶಿಸಿದರು.

LEAVE A REPLY

Please enter your comment!
Please enter your name here