ಪದವಿಪೂರ್ವ ಕಾಲೇಜು ಕಟ್ಟಡದ ಉದ್ಘಾಟನೆ

0
242
ರೋಟರಿ ಪದವಿಪೂರ್ವ ಕಾಲೇಜು ಕಟ್ಟಡವನ್ನು ಸಾಂಪ್ರದಾಯಿಕವಾಗಿ ದೀಪ ಬೆಳಗಿ ಉದ್ಘಾಟಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ.

ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡಬಿದಿರೆ
ನಮ್ಮ ಪ್ರತಿನಿಧಿ ವರದಿ
ಮೂಡಬಿದಿರೆಯ ಪ್ರತಿಷ್ಠಿತ ರೋಟರಿ ಶಿಕ್ಷಣ ಸಂಸ್ಥೆಯ ನೂತನ ಪದವಿಪೂರ್ವ ಕಾಲೇಜು ಕಟ್ಟಡದ ಉದ್ಘಾಟನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ಇಂದು ನೆರವೇರಿಸಿದರು. ಸಂಸ್ಥೆಯ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸುಸಜ್ಜಿತವಾಗಿ ಕೇವಲ 9 ತಿಂಗಳ ಅವಧಿಯಲ್ಲಿ ನಿರ್ಮಾಣಗೊಂಡ ಕಟ್ಟಡ ಆಕರ್ಷಕವಾಗಿ ಮೂಡಿಬಂದಿದೆ.

ಸುಸಜ್ಜಿತವಾಗಿ ನಿರ್ಮಾಣಗೊಂಡ ಕಟ್ಟಡವನ್ನು ಅತ್ಯಾಧುನಿಕ ರೀತಿಯಲ್ಲಿ ಉದ್ಘಾಟಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು.
ಸುಸಜ್ಜಿತವಾಗಿ ನಿರ್ಮಾಣಗೊಂಡ ಕಟ್ಟಡವನ್ನು ಅತ್ಯಾಧುನಿಕ ರೀತಿಯಲ್ಲಿ ಉದ್ಘಾಟಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಎಜುಕೇಷನ್ ಸೊಸೈಟಿ ಮೂಡಬಿದಿರೆ ಇದರ ಅಧ್ಯಕ್ಷ ಕೆ.ಅಮರನಾಥ ಶೆಟ್ಟಿ ವಹಿಸಿದ್ದರು. ಅತಿಥಿಗಳಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಂಗಳೂರು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ.ಪುರಾಣಿಕ್, ಮೂಡಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ಮೊಹಮ್ಮದ್ ಶರೀಫ್  ಭಾಗವಹಿಸಿದ್ದರು.
ರೋಟರಿ ಪದವಿಪೂರ್ವ ಕಾಲೇಜು ಕಟ್ಟಡವನ್ನು ಸಾಂಪ್ರದಾಯಿಕವಾಗಿ ದೀಪ ಬೆಳಗಿ ಉದ್ಘಾಟಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ.
ರೋಟರಿ ಪದವಿಪೂರ್ವ ಕಾಲೇಜು ಕಟ್ಟಡವನ್ನು ಸಾಂಪ್ರದಾಯಿಕವಾಗಿ ದೀಪ ಬೆಳಗಿ ಉದ್ಘಾಟಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ.

ವೇದಿಕೆಯಲ್ಲಿ ಶಾಲೆಯ ಕರೆಸ್ಪಾಂಡೆಂಟ್ ಬಿ.ಎ.ಯತಿಕುಮಾರ್ ಸ್ವಾಮಿ ಗೌಡ, ಆಡಳಿತಾಧಿಕಾರಿ ಶುಭಕರ್ ಅಂಚನ್, ಅನಂತ ಕೃಷ್ಣ ರಾವ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ರೋಟರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಕೆ.ಅಮರನಾಥ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ರೋಟರಿ ಕಾರ್ಯದರ್ಶಿ ನಾರಾಯಣ ಪಿ.ಎಂ. ಸ್ವಾಗತಿಸಿದರು. ಪ್ರಾಂಶುಪಾಲ ವಿನ್ಸೆಂಟ್ ಡಿ’ಕೋಸ್ತ ಶೈಕ್ಷಣಿಕ ವರದಿ ವಾಚಿಸಿದರು.
ಸಮಾರಂಭಕ್ಕೆ ಸಾಕ್ಷಿಯಾದ ಜನಸ್ತೋಮ
ಸಮಾರಂಭಕ್ಕೆ ಸಾಕ್ಷಿಯಾದ ಜನಸ್ತೋಮ

ಮೆರವಣಿಗೆಯ ಮೂಲಕ ಸ್ವಾಗತ
ಮೆರವಣಿಗೆಯ ಮೂಲಕ ಸ್ವಾಗತ

ಗಣ್ಯ ಅತಿಥಿಗಳನ್ನು ಬರಮಾಡಿಕೊಳ್ಳುತ್ತಿರುವ ಸಂಸ್ಥೆಯ ಪ್ರಾಂಶುಪಾಲ ವಿನ್ಸೆಂಟ್ ಡಿ'ಕೋಸ್ತ.
ಗಣ್ಯ ಅತಿಥಿಗಳನ್ನು ಬರಮಾಡಿಕೊಳ್ಳುತ್ತಿರುವ ಸಂಸ್ಥೆಯ ಪ್ರಾಂಶುಪಾಲ ವಿನ್ಸೆಂಟ್ ಡಿ’ಕೋಸ್ತ.

LEAVE A REPLY

Please enter your comment!
Please enter your name here