ಮೂಡುಬಿದಿರೆ: ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ, ಸಂದೇಶಗಳನ್ನು ಮಾಧ್ಯಮದ ಮೂಲಕ ಪರಿಣಾಮಕಾರಿಯಾಗಿ ಪ್ರಚಾರ ಮಾಡಲು ಪಕ್ಷದಲ್ಲಿ ಹೊಂದಿರುವ ಅನುಭವ ಹಾಗೂ ಕಾರ್ಯಶೈಲಿಯನ್ನು ಗಮನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಂಗ್ರೆಸ್ ಮುಖಂಡ ಪದ್ಮಪ್ರಸಾದ್ ಜೈನ್ ಅವರನ್ನು ಕೆಪಿಸಿಸಿ ಮೀಡಿಯಾ ಪ್ಯಾನಲಿಸ್ಟ್ ಆಗಿ ಆಯ್ಕೆ ಮಾಡಿದೆ.



ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಆಯ್ಕೆಯನ್ನು ಪ್ರಕಟಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಸಿದ್ದಾಂತವನ್ನು ಅತ್ಯಂತ ನಿಷ್ಠೆಯಿಂದ ಒಪ್ಪಿಕೊಂಡು ರಾಜ್ಯಮಟ್ಟದಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ನಿರ್ವಹಿಸಿದ ಅನುಭವ ಪದ್ಮಪ್ರಸಾದ್ ಜೈನ್ ಅವರದ್ದು. ಎನ್ ಎಸ್ ಯು ಐ ಉಪಾಧ್ಯಕ್ಷರಾಗಿ , ಪಿ.ವೈ.ಸಿ. ಕಾರ್ಯದರ್ಶಿಯಾಗಿ, ಕೆ.ಪಿ.ಸಿ.ಸಿ ಲೀಗಲ್ ಸೆಲ್ ಪ್ರಧಾನ ಕಾರ್ಯದರ್ಶಿಯಾಗಿ, ದಕ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಬಲವರ್ಧನೆಯ ಕಾರ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಿದ್ದರು.