ಪರಿಷತ್ ಫೈಟ್

0
414

 
ಬೆಂಗಳೂರು ಪ್ರತಿನಿಧಿ ವರದಿ
ವಿಧಾನಪರಿಷತ್ ಚುನಾವಣೆ ಆರಂಭವಾಗಿದೆ. ವಿಧಾನಸಭೆಯಿಂದ ವಿಧಾನಪರಿಷತ್ ನ 7 ಸ್ಥಾನಗಳಿಗೆ ಮತದಾನ ಶುರುವಾಗಿದೆ. 4 ಸ್ಥಾನಗಳಲ್ಲಿ ಕಾಂಗ್ರೆಸ್, 3 ಸ್ಥಾನಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಫೈಟ್ ನಡೆಯುತ್ತಿದೆ.
 
 
ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮತದಾನ ಬೆಳಗ್ಗೆ 9 ಗಂಟೆಯಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಸಂಜೆ 5ರಿಂದ ಮತ ಎಣಿಕೆ ಆರಂಭವಾಗಲಿದ್ದು, ರಾತ್ರಿಯೊಳಗೆ ಫ‌ಲಿತಾಂಶ ಹೊರಬೀಳಲಿದೆ.
 
ಮತದಾನ ನಡೆಯುವ ಪೂರ್ತಿ ಅವಧಿಯಲ್ಲಿ ಕೊಠಡಿ ಒಳಭಾಗ ಮತ್ತು ಹೊರಭಾಗದಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಮತದಾನ ಕೇಂದ್ರದೊಳಗೆ ಮೊಬೈಲ್‌ ನಿಷೇಧಿಸಲಾಗಿದೆ.
 
 
ಸ್ಪೀಕರ್‌ ಸೇರಿದಂತೆ ವಿಧಾನಸಭೆಗೆ ಆಯ್ಕೆಯಾಗಿರುವ ಎಲ್ಲಾ 224 ಸದಸ್ಯರು ಮತ್ತು ಒಬ್ಬ ನಾಮನಿರ್ದೇಶಿತ ಸದಸ್ಯ ಸೇರಿದಂತೆ 225 ಮಂದಿಗೆ ಮತದಾನದ ಹಕ್ಕಿದೆ.

LEAVE A REPLY

Please enter your comment!
Please enter your name here