ಪಾಕ್ ಜತೆಗಿನ ದ್ವಿಪಕ್ಷೀಯ ಮಾತುಕತೆ ಇಲ್ಲ

0
288

ವರದಿ: ಲೇಖಾ
ಆಗಸ್ಟ್ 4ರಂದು ಇಸ್ಲಾಮಾಬಾದ್​ನಲ್ಲಿ ನಡೆಯಲಿರುವ ಸಾರ್ಕ್ ಶೃಂಗ ಸಭೆ ವೇಳೆ ಪಾಕಿಸ್ತಾನ ನಾಯಕರ ಜೊತೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಯಾವುದೇ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟ ಪಡಿಸಿದೆ.
 
 
 
ಭಾರತದ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಸಾರ್ಕ್ ಶೃಂಗ ಸಭೆಗೆ ಹೋಗುತ್ತಿದ್ದಾರೆ. ಅಲ್ಲಿ ಪಾಕಿಸ್ತಾನದ ಜೊತೆಗೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆಯುವುದಿಲ್ಲ ಎಂಬುದಾಗಿ ಖಂಡತುಂಡವಾಗಿ ಸ್ಪಷ್ಟ ಪಡಿಸುತ್ತಿದ್ದೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ ಸ್ವರೂಪ್ ಟ್ವೀಟ್ ಮಾಡಿದ್ದಾರೆ.
 
 
 
ಗೃಹ ಸಚಿವಾಲಯದ ಹೆಸರು ಉಲ್ಲೇಖಿಸದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿದ ಕೆಲವು ವರದಿಗಳು ರಾಜನಾಥ್ ಸಿಂಗ್ ಅವರು ಪಾಕ್ ಗೃಹ ಸಚಿವ ಚೌಧರಿ ನಿಸಾರ್ ಅಲಿ ಖಾನ್ ಮತ್ತು ಪಾಕ್ ಪ್ರಧಾನಿ ನವಾಜ್ ಷರೀಪ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಸ್ವರೂಪ್ ಈ ಸ್ಪಷ್ಟನೆ ನೀಡಿದ್ದಾರೆ.
 
 
ಎಂಟು ಸದಸ್ಯರ ಸಾರ್ಕ್ ರಾಷ್ಟ್ರಗಳ ಗೃಹ ಸಚಿವರ ಸಭೆ ಆಗಸ್ಟ್ 3ರಿಂದ 4ರವರೆಗೆ ನಡೆಯಲಿದ್ದು, ಈ ವೇಳೆ ರಾಜನಾಥ್ ಸಿಂಗ್ ಅವರು ಗಡಿ ಭಯೋತ್ಪಾದನೆಯನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here