ಪಾಕ್ ನಲ್ಲಿ ಐಸಿಸ್ ಆಟಾಟೋಪ

0
452

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಪಾಕಿಸ್ತಾನದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಪಾಕ್ ನಬಲೂಚಿಸ್ತಾನದ ಖ್ವೆಟ್ಟಾದಲ್ಲಿರೋ ಪೊಲೀಸ್ ತರಬೇತಿ ಶಾಲೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಕಳೆದ ರಾತ್ರಿ 11.15ರ ಸುಮಾರಿಗೆ 4 ರಿಂದ 6 ಮಂದಿಯಿದ್ದ ಉಗ್ರರ ಗುಂಪೊಂದು ಕಾಂಪೌಂಡ್ ಹಾರಿ ಖ್ವೆಟ್ಟಾದ ಪೊಲೀಸ್ ತರಬೇತಿ ಶಾಲೆಯ ಮೇಲೆ ದಾಳಿ ನಡೆಸಿದ ಪರಿಣಾಮ 60ಕ್ಕೂ ಹೆಚ್ಚು ಮಂದಿಯನ್ನು ಸಾವನ್ನಪ್ಪಿದ್ದಾರೆ.
 
 
 
ದಾಳಿಯಲ್ಲಿ 250ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕೊಠಡಿಗಳಲ್ಲಿ 250 ಕ್ಕೂ ಹೆಚ್ಚು ಪೊಲೀಸರಿದ್ದರು. ಮತ್ತಷ್ಟು ಪೊಲೀಸರನ್ನು ಉಗ್ರರು ಒತ್ತೆಯಾಳುಗಳನ್ನಾಗಿರಿಸಿಕೊಂಡಿದ್ದಾರೆ.
 
ಇನ್ನು ಪೊಲೀಸ್ ತರಬೇತಿ ಶಾಲೆಯ ಸುತ್ತ ಪಾಕ್ ಸೇನೆ ಸುತ್ತುವರಿದಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದ್ದು, ಉಳಿದ ಓರ್ವ ಉಗ್ರನಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸುಮಾರು 700ಕ್ಕೂ ಅಧಿಕ ಸೇನಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ನಿರತವಾಗಿದ್ದು, 250 ಮಂದಿಯನ್ನು ರಕ್ಷಣೆ ಮಾಡಿದೆ. ಇಬ್ಬರು ಉಗ್ರರು ತಮ್ಮನ್ನು ತಾವು ಸ್ಪೋಟಿಸಿಕೊಂಡಿದ್ದಾರೆ.
ಈ ಘಟನ ಬಗ್ಗೆ ಮೊದಲೇ ಐಸಿಸ್ ಸಂಘಟನೆ ಮುನ್ನೆಚ್ಚರಿಕೆ ನೀಡಿತ್ತು ಎನ್ನಲಾಗಿದೆ.

LEAVE A REPLY

Please enter your comment!
Please enter your name here