ಪಾಕ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

0
405

ವರದಿ: ಲೇಖಾ
ನೆರೆ ರಾಷ್ಟ್ರ, ಭಾರತವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಜಮ್ಮು-ಕಾಶ್ಮೀರದ ಪ್ಯಾಂಪೋರ್ ದಾಳಿ ಕುರಿತು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
 
ಜಮ್ಮು-ಕಾಶ್ಮೀರದ ಪ್ಯಾಂಪೋರ್ ದಾಳಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪ್ಯಾಂಪೋರ್ ನಲ್ಲಿ ಭದ್ರತೆಯ ಮೇಲ್ವಿಚಾರಣೆಗಾಗಿ ಇಬ್ಬರು ಸದಸ್ಯರ ಸಮಿತಿಯನ್ನು ಕಳಿಸಿದ್ದು ಮುಂದಿನ ದಿನಗಳಲ್ಲಿ ಯೋಧರು ಇಂತಹ ಘಟನೆಗಳಲ್ಲಿ ಹುತಾತ್ಮರಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದರು.
 
 
 
ಭಯೋತ್ಪಾದಕ ದಾಳಿಗಳ ಮೂಲಕ ನಮ್ಮ ನೆರೆ ರಾಷ್ಟ್ರವು ಭಾರತದಲ್ಲಿ ಅಸ್ಥಿರತೆ ಉಂಟು ಮಾಡಲು ಪ್ರಯತ್ನಿಸುತ್ತಿದೆ. ದೇಶದ ಯುವಜನರು ಇಂತಹ ಪಾಕ್ ಪ್ರಯತ್ನಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಿರಬೇಕು ಎಂದು ಕರೆ ನೀಡಿದರು.
 
 
 
ಪ್ಯಾಂಪೋರ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಡಿದ ಯೋಧರನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ರಾಜನಾಥ್ ಸಿಂಗ್ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.
 
 
ಜೂ.25 ರಂದು ಸಿಆರ್​ಪಿಎಫ್ ಯೋಧರಿದ್ದ ಬಸ್ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 8 ಯೋಧರು ಹುತಾತ್ಮರಾಗಿದ್ದರೆ, 21 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

LEAVE A REPLY

Please enter your comment!
Please enter your name here