ಪೆಟ್ರೋಲ್ ಏರಿಕೆ-ಡಿಸೇಲ್ ಇಳಿಕೆ

0
136

ರಾಷ್ಟ್ರೀಯ ಪ್ರತಿನಿಧಿ ವರದಿ
ತೈಲ ಬೆಲೆಯಲ್ಲಿ ಕೊಂಚ ಬದಲಾವಣೆಯಾಗಿದೆ. ಪ್ರತಿ ಒಂದು ಲೀಟರ್ ಪೆಟ್ರೋಲ್ ದರವನ್ನು ಅಲ್ಪಪ್ರಮಾಣದಲ್ಲಿ ಏರಿಕೆ ಮಾಡಿದ್ದು, ಡೀಸೆಲ್ ದರದಲ್ಲಿ ಕೊಂಚ ಇಳಿಕೆ ಮಾಡಲಾಗಿದೆ.
 
 
ಪ್ರತಿ ಲೀಟರ್ ಪೆಟ್ರೋಲ್ ಬೆಲೆ 58 ಪೈಸೆ ಏರಿಕೆಯಾಗಿದೆ. ಪ್ರತಿ ಲೀಟರ್ ಡೀಸೆಲ್ ಬೆಲೆ 31 ಪೈಸೆ ಇಳಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಕಳೆದ ಮಧ್ಯರಾತ್ರಿಯಿಂದ ಪರಿಷ್ಕೃತ ದರವನ್ನು ಜಾರಿಗೆ ತಂದಿದೆ.
 
 
ಕಳೆದ ಆಗಸ್ಟ್ 31ರಂದು ಪೆಟ್ರೋಲ್ ಪ್ರತಿ ಲೀಟರ್ ಗೆ 3.38 ರೂ. ಹಾಗೂ ಡೀಸೆಲ್ ಪ್ರತಿ ಲೀಟರ್ 2.67 ರೂ. ಏರಿಕೆ ಮಾಡಲಾಗಿತ್ತು. ಇದಕ್ಕೂ ಮುನ್ನ ಆಗಸ್ಟ್ 15 ರಂದು ಪೆಟ್ರೋಲ್ ಮತ್ತು ಡಿಸೇಲ್ ದರದಲ್ಲಿ ಕಡಿತ ಮಾಡಲಾಗಿತ್ತು. ಲೀಟರ್ ಪೆಟ್ರೋಲ್ ಗೆ ಒಂದು ರೂ. ಕಡಿತ ಮಾಡಿದ್ದರೆ, ಡಿಸೇಲ್ ದರವನ್ನು 2 ರೂ. ಕಡಿಮೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here