ಪೆಟ್ರೋಲ್-ಡೀಸೆಲ್ ತುಟ್ಟಿ

0
179

ರಾಷ್ಟ್ರೀಯ ಪ್ರತಿನಿಧಿ ವರದಿ
ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ವೊಂದಿದೆ. ತೈಲ ಬೆಲೆಯಲ್ಲಿ ಏರಿಕೆಯಾಗಿದೆ. ಶುಕ್ರವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ತೈಲೋತ್ಪನ್ನಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.
 
 
ಪೆಟ್ರೋಲ್ ದರದಲ್ಲಿ ಲೀಟರ್ ಗೆ ರೂ. 2.21 ಮತ್ತು ಡೀಸೆಲ್ ದರದಲ್ಲಿ ಲೀಟರ್ ಗೆ ರೂ. 1.79 ಏರಿಕೆ ಮಾಡಿ ಪೆಟ್ರೋಲಿಯಂ ಸಚಿವಾಲಯ ಆದೇಶ ಹೊರಡಿಸಿದೆ.
 
 
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಮಾಡಲಾಗಿದೆ ಸಚಿವಾಲಯ ಸ್ಪಷ್ಟನೆ ನೀಡಿದೆ.
ಕಳೆದ ನವೆಂಬರ್ 30ರಂದು ಪೆಟ್ರೋಲ್ ಬೆಲೆಯಲ್ಲಿ 13 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆಯಲ್ಲಿ 12 ಪೈಸೆ ಇಳಿಕೆಯಾಗಿತ್ತು.

LEAVE A REPLY

Please enter your comment!
Please enter your name here