ಮೂಡುಬಿದಿರೆ: ಕೋವಿಡ್ – ೧೯ ಹಿನ್ನಲೆಯಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಪುರಸಭೆಯ ವತಿಯಿಂದ ಈ ಕಾರ್ಯ ನಡೆಸಲಾಗಿದೆ.
ಇತ್ತೀಚೆಗೆ ಎಲ್ಲೆಂದರಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಮೂಡುಬಿದಿರೆ ವ್ಯಾಪ್ತಿಯಲ್ಲೂ ದೊಡ್ಡ ಸುದ್ದಿ ಮಾಡಿತ್ತು. ಮಾತ್ರವಲ್ಲದೆ ಪೊಲೀಸ್ ಠಾಣೆಗೂ ಭೀತಿ ಉಂಟಾಗುವಂತೆ ಮಾಡಿತ್ತು. ಇದೀಗ ಮೂಡುಬಿದಿರೆ ಪೊಲೀಸ್ ಠಾಣೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ರೋಗ ಭೀತಿ ದೂರವಾಗುವಂತಾಗಿದೆ. ಶುಕ್ರವಾರ ಪುರಸಭೆಯ ಸಿಬ್ಬಂದಿಗಳು ಸ್ಯಾನಿಟೈಸ್ ಮಾಡಿದರು. ಸಾರ್ವಜನಿಕರು ಪೊಲೀಸ್ ಠಾಣೆಯ ಪ್ರಯೋಜನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.