ಪ್ರಜ್ವಲಿಸಿತು ಮಕರಜ್ಯೋತಿ…ಪುನೀತರಾದರು ಭಕ್ತಜನ ಸಾಗರ…

0
270
ಪೊನ್ನಂಬಲಮೇಡು ಗಿರಿಯಲ್ಲಿ ಮಕರಜ್ಯೋತಿ ಕಾಣಿಸಿಕೊಳ್ಳುತ್ತದೆ

ನೇರ ಪ್ರಸಾರ :live news
ನಾಡೋಡಿ.
ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ಮಕರ ಜ್ಯೋತಿಯ ದರ್ಶನವನ್ನು ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆ. ಮಕರ ಜ್ಯೋತಿ ಕಾಣಿಸುವುದಕ್ಕೂ ಮೊದಲು ಒಂದು ವಿಶೇಷ ನಕ್ಷತ್ರ ಬೆಟ್ಟದ ತುದಿಯಲ್ಲಿ ಆಕಾಶದಲ್ಲಿ ಗೋಚರಿಸುತ್ತದೆ. ಪುರಾಣದ ಪ್ರಕಾರ ಈ ಬೆಳಕು ಧರ್ಮಸಸ್ತರ ವಾಸಸ್ಥಳ ಅಂಬಾಲಮೇಡುವಿನಿಂದ ಪ್ರಕಾಶಿಸುತ್ತದೆ. ಇದೀಗ ಈ ಬಾರಿಯ ಜ್ಯೋತಿ ಪ್ರಜ್ವಲಿಸಿದೆ. ಸೇರಿದ್ದ ಲಕ್ಷಾಂತರ ಅಯ್ಯಪ್ಪ ಭಕ್ತರು ಜ್ಯೋತಿ ವೀಕ್ಷಿಸಿ ಪುನೀತರಾಗಿದ್ದಾರೆ.
 
ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ ಸ್ವಾಮಿಯ ಪಾದಕ್ಕೆರಗಿ ಮಕರ ಜ್ಯೋತಿಯ ದರ್ಶನವನ್ನು ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆ ಯಿಂದಾಗಿ ಲಕ್ಷೋಪಲಕ್ಷ ಜನರು ಈ ಜ್ಯೋತಿಯ ದರ್ಶನಕ್ಕಾಗಿ ವರ್ಷಂಪ್ರತಿ ಶಬರಿಮಲೆ ಸನ್ನಿಧಾನಕ್ಕಾಗಮಿಸುತ್ತಾರೆ. “ಮಕರ ವಿಳಕ್ಕು”ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತದೆ.ಇದು ವೈಜ್ಞಾನಿಕವಾಗಿ ಸಾಬೀತಾಗಿ ಲ್ಲವಾದರೂ, ಪ್ರಸ್ತುತ ಕಾಲದಲ್ಲಿಯೂ ಆಧ್ಯಾತ್ಮಿಕತೆಯ ಕುರುಹನ್ನು ತೋರಿಸುತ್ತದೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸಿ ಲೋಕದ ಕಾರಿರುಳನ್ನು ಹೋಗಲಾಡಿಸುವಂತೆ ಜನರು ಈ ಕಾಲದಲ್ಲಿ ಪುಣ್ಯ ಕಾರ್ಯಗಳಲ್ಲಿಯೂ ಆಧ್ಯಾತ್ಮಿಕ ಚಿಂತೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಮುಕ್ತಿ ಮಾರ್ಗದಲ್ಲಿ ಸಾಗುವಂತೆ ಈ ಆಚರಣೆಯು ಪ್ರೇರಣೆಯನ್ನು
ನೀಡುತ್ತದೆ. ಈ ಬಾರಿಯೂ ದೇಶದ ನಾನಾ ಭಾಗಗಳಿಮದ ಲಕ್ಷಾಂತರ ವೃತಾಧಾರಿ ಭಕ್ತರು ಶ್ರೀ ಕ್ಷೇತ್ರ ಶಬರಿಮಲೆಯಲ್ಲಿ ಸೇರಿದ್ದಾರೆ. ಮಕರ ಜ್ಯೋತಿಯ ವೀಕ್ಷಣೆಯಿಂದ ಪುನೀತರಾಗಿದ್ದಾರೆ.
 

LEAVE A REPLY

Please enter your comment!
Please enter your name here