ಪ್ರತಿಭಟನೆ

0
414

ಮೂಡುಬಿದರೆ
ಯೋಗ ಮತ್ತು ನ್ಯಾಚುರೋಪತಿಯನ್ನು ಭಾರತೀಯ ಔಷಧ ಪದ್ಧತಿಯ ರಾಷ್ಟ್ರೀಯ ಆಯೋಗಕ್ಕೆ (ಎನ್.ಸಿ.ಐ.ಎಸ್.ಎಮ್.ಕೆ.) ಸೇರಿಸುವಂತೆ ಭಾರತ ಸರ್ಕಾರವನ್ನು ಆಗ್ರಹಿಸಿ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ವತಿಯಿಂದ ಒಂದು ದಿನದ ಮೌನ ಮತ್ತು ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಯಿತ್ತು.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆಳ್ವಾಸ್ ಯೋಗ ಮತ್ತು ನ್ಯಾಚುರೋಪತಿಯ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ ಮಾತನಾಡಿ, ಕೇಂದ್ರ ಸರಕಾರ ಯೋಗ ಸೇರಿದಂತೆ ನ್ಯಾಚುರೋಪತಿಗೆ ವಿಶೇಷ ಆದ್ಯತೆ ನೀಡುತ್ತಿದ್ದರೂ, ಇದರ ಶೈಕ್ಷಣಿಕ ವ್ಯವಸ್ಥೆಯಲ್ಲಿ ನ್ಯೂನತೆಯುಂಟಾಗಿದೆ. ಇಂದು ದೇಶದುದ್ದಗಲಕ್ಕೂ ಯೋಗ ಮತ್ತು ನ್ಯಾಚುರೋಪತಿ ಪ್ರಕೃತಿ ಚಿಕಿತ್ಸೆಯ 42 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಿದ್ದು ಕಳೆದ 25 ವರ್ಷಗಳಲ್ಲಿ 5000 ವೈದ್ಯಕೀಯ ಪದವೀಧರರು ದೇಶ ಹೊರದೇಶಗಳಲ್ಲಿ ದುಡಿಯುತ್ತಿದ್ದಾರೆ. ಪ್ರಸ್ತುತ 7 ಸಾವಿರ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಒಂದುವೇಳೆ ಯೋಗ ಮತ್ತು ನ್ಯಾಚುರೋಪತಿಯನ್ನು ಭಾರತೀಯ ಔಷಧ ಪಧ್ಧತಿಯ ರಾಷ್ಟ್ರೀಯ ಆಯೋಗಕ್ಕೆ ಸೇರಿಸದೇ ಹೋದಲ್ಲಿ ಅಷ್ಟು ವಿದ್ಯಾರ್ಥಿಗಳ ಭವಿಷ್ಯ ಗೊಂದಲಮಯವಾಗಲಿದೆ. ಆದ್ದರಿಂದ ಯೋಗ ಮತ್ತು ನ್ಯಾಚುರೋಪತಿಯನ್ನು ಭಾರತೀಯ ಔಷಧಪದ್ದತಿಯ ರಾಷ್ಟ್ರೀಯ ಆಯೋಗಕ್ಕೆ( ನ್ಯಾಷನಲ್ ಕಮಿಷನ್ ಫಾರ್ ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್) ಸೇರಿಸುವಂತೆ ಆಗ್ರಹಿಸುತ್ತೇವೆ ಎಂದರು.

Advertisement

ನೀತಿ ಆಯೋಗ, ಆಯುಷ್ ಸಚಿವಾಲಯದ ಪ್ರಸ್ತಾವನೆಯಿದ್ದರೂ ನ್ಯಾಚುರೋಪತಿಯನ್ನು ಔಷಧೀಯ ಪದ್ಧತಿಗೆ ಸೇರಿಸದೇ ಇರುವುದು ದುರದೃಷ್ಟಕರ ಎಂದು ಪ್ರತಿಭಟನೆಯಲ್ಲಿ ಭಾಗಿಯಾದವರು ಅಭಿಪ್ರಾಯಪಟ್ಟರು.

ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಉಪನ್ಯಾಸಕರು, ಕಛೇರಿ ಸಿಬ್ಬಂದಿಗಳು ಸೇರಿ ಸುಮಾರು ಯೋಗ ಮತ್ತು ನ್ಯಾಚುರೋಪತಿಯ ಫಲಾನುಭವಿಗಳು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.
.

LEAVE A REPLY

Please enter your comment!
Please enter your name here