ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಆರಂಭ

0
331

ವರದಿ: ಲೇಖಾ
ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೆಂದ್ರ ಮೋದಿ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ಆರಂಭವಾಗಿದೆ.
 
 
ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಭಯೋತ್ಪಾದಕ ಬುರ್ಹಾನ್ ವನಿ ಹತ್ಯೆಯ ಬಳಿಕ ಕಾಶ್ಮೀರದ ವಿವಿಧ ಭಾಗಗಳಲ್ಲಿ ಭುಗಿಲೆದ್ದಿರುವ ಗಲಭೆಗಳಲ್ಲಿ 30 ಜನ ಸಾವನ್ನಪ್ಪಿದ್ದಾರೆ, 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ರಾಜ್ಯದ ಹಲವಡೆ ನಾಲ್ಕನೇ ದಿನವೂ ಕರ್ಫ್ಯೂ ಮುಂದುವರೆದಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಂ.7, ರೇಸ್‌ ಕೋರ್ಸ್‌ ರಸ್ತೆಯ ನಿವಾಸದಲ್ಲಿ ಉನ್ನತಮಟ್ಟದ ಸಭೆ ನಡೆಯುತ್ತಿದೆ.
 
 
ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ಮನೋಹರ ಪರಿಕ್ಕರ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ ಮತ್ತಿತರ ಸಚಿವರು, ರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ಅಜಿತ್ ದೋವಲ್ ಸೇರಿದಂತೆ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
 
 
ಗೃಹ ಸಚಿವ ರಾಜನಾಥ್ ಸಿಂಗ್ ಅವರು ತಮ್ಮ ಅಮೆರಿಕ ಪ್ರವಾಸವನ್ನು ರದ್ದು ಪಡಿಸಿದ್ದು, ಕಾಶ್ಮೀರದ ಬೆಳವಣಿಗೆಗಳ ಬಗ್ಗೆ ಪ್ರಧಾನಿಗೆ ವಿವರಗಳನ್ನು ನೀಡಿದ್ದಾರೆ. ಪ್ರತ್ಯೇಕತಾವಾದಿ ಪ್ರಾಯೋಜಿತ ಮುಷ್ಕರದಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ತಿಳಿಗೊಳಿಸುವ ಮಾರ್ಗಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here