ಪ್ರಧಾನಿ ವಿಡಿಯೋ ಕಾನ್ಫರೆನ್ಸ್

0
157


ಮಹಾಮಾರಿ ಕರೋನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯ ಸರಕಾರಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯ ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ಸಭೆ ನಡೆಸುತ್ತಿದ್ದಾರೆ. ಬೇರೆ ದೇಶಗಳಲ್ಲಿ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಪ್ರಧಾನಿ ಎಲ್ಲಾ ಸಿಎಂಗಳಿಗೆ ಮಾಹಿತಿ ನೀಡಿದ್ದಾರೆ.

ಬಿಎಸ್ ವೈ ಸಂವಾದ
ಪ್ರಧಾನಮಂತ್ರಿ ಮೋದಿ ಜತೆ ಸಿಎಂ ಯಡಿಯೂರಪ್ಪ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಡಿಯೋ ಸಂವಾದ ನಡೆಸುತ್ತಿದ್ದಾರೆ. ಸೋಂಕು ಹರಡದಂತೆ ಕೈಗೊಂಡ ಕ್ರಮಗಳ ಬಗ್ಗೆ ಸಿಎಂ, ಸಚಿವರು ಮಾಹಿತಿ ನೀಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ಗೃಹಸಚಿವ ಬಸವರಾಜ ಬೊಮ್ಮಾಯಿ, ಸಿಎಸ್ ವಿಜಯಭಾಸ್ಕರ್, ಕೊರೋನಾ ಟಾಸ್ಕ್ ಫೋರ್ಸ್‍ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here