ಪ್ರಬಲ ಭೂಕಂಪನ

0
544

ರಾಷ್ಟ್ರೀಯ ಪ್ರತಿನಿಧಿ ವರದಿ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಭೂಕಂಪನವಾಗಿದೆ. ಮಂಗಳವಾರ ಬೆಳಗ್ಗೆ 8.21ರ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 5.9ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದೆ.ನಿಕೋಬಾರ್ ದ್ವೀಪ ಸಮೂಹ ಭೂಗರ್ಭದ ಸುಮಾರು 10 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಯಾವುದೇ ಸಾವು-ನೋವಿನ ವರದಿಯಾಗಿಲ್ಲ.
 
 
ಕಣಿವೆ ರಾಜ್ಯದಲ್ಲೂ…
ಇದೇ ಸಂದರ್ಭದಲ್ಲಿ ಬೆಳಗ್ಗೆ 5.48 ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲೂ ಲಘು ಪ್ರಮಾಣದ ಭೂಮಿ ಕಂಪಿಸಿದ ಅನುಭವವಾಗಿದ್ದು ರಿಕ್ಟರ್ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ.
 
 
 
ನಿನ್ನೆಯೂ ಕಂಪಿಸಿದ ಭೂಮಿ
ನಿನ್ನೆಯೂ ಆಂಧ್ರಪ್ರದೇಶದಲ್ಲಿ ಭೂಕಂಪನವಾಗಿದೆ. ಆಂಧ್ರದ ಓಂಗೋಲ್ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.5ರಷ್ಟು ಕಂಪನದ ತೀವ್ರತೆ ದಾಖಲಾಗಿದೆ.

LEAVE A REPLY

Please enter your comment!
Please enter your name here