ಪ್ರಬಲ ಭೂಕಂಪ

0
608

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ನೇಪಾಳದಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದೆ. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ನೇಪಾಳದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆ ದಾಖಲಾಗಿದೆ.
 
 
 
 
ಭೂಕಂಪನದ ಕೇಂದ್ರ ನಮ್ಚೆ ಬಜಾರ್ ನಿಂದ 19 ಕಿ.ಮೀ. ದೂರದಲ್ಲಿದ್ದು, ಭೂಮಿಯ 10 ಕಿ.ಮೀ. ಆಳದಲ್ಲಿದೆ ಎಂದು ಹೇಳಲಾಗಿದೆ. ಯಾವುದೇ ಆಸ್ತಿಪಾಸ್ತಿ ಹಾನಿ, ಸಾವುನೋವು ಸಂಭವಿಸಿದ ಬಗ್ಗೆ ಈವರೆಗೆ ವರದಿಯಾಗಿಲ್ಲ.
 
 
 
2015ರ ಏಪ್ರಿಲ್ ನಲ್ಲಿ ನೇಪಾಳದಲ್ಲಿ 7.8ರ ಪ್ರಮಾಣದ ಭಾರೀ ಭೂಕಂಪ ಸಂಭವಿಸಿ, ಹಲವಾರು ಪ್ರದೇಶಗಳನ್ನು ನಾಶವಾಗಿತ್ತು. ಘಟನೆಯಲ್ಲಿ ಸಾವಿರರೂ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದರು. ಲಕ್ಷಾಂತರ ಜನರು ಮನೆಮಠ ಕಳೆದುಕೊಂಡಿದ್ದರು.

LEAVE A REPLY

Please enter your comment!
Please enter your name here