ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

0
400

 
ವರದಿ: ಲೇಖಾ
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾವತಿಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡೆ ಹಾಗೂ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಒಟ್ಟು 7 ಪ್ರಶಸ್ತಿಗಳನ್ನು ನೀಡಲಾಗುವುದು.
 
 
 
ಆದ್ದರಿಂದ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡುವ ರಾಜ್ಯ ಪ್ರಶಸ್ತಿಗಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
 
 
ಅರ್ಜಿಗಳನ್ನು ಆಯಾ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಮೂಲಕ ಆಗಸ್ಟ್ 21 ರೊಳಗಾಗಿ ನಿರ್ದೇಶನಾಲಯಕ್ಕೆ ತಲುಪುವಂತೆ ಕನ್ನಡ ಭಾಷೆಯಲ್ಲಿ ನಿಗದಿತ ನಮೂನೆಯಲ್ಲಿ ದ್ವಿಪ್ರತಿಗಳಲ್ಲಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ ww.welfareofdisabled.kar.nic.in ಪರಿಶೀಲಿಸಲು ಮತ್ತು ಆಯಾ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಇವರನ್ನು ಸಂಪರ್ಕಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-22860907, 080-22866046 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here