ಪ್ರಿಟೋರಿಯಾ ತಲುಪಿದ ಪ್ರಧಾನಿ

0
547

 
ವರದಿ: ಲೇಖಾ
ಆಫ್ರಿಕಾದ ನಾಲ್ಕು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೊಜಾಂಬಿಕ್​ನಿಂದ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ದಕ್ಷಿಣ ಆಫ್ರಿಕಾದ ಪ್ರಿಟೋರಿಯಾಕ್ಕೆ ತಲುಪಿದ ಪ್ರಧಾನಿ ಮೋದಿ ಅವರಿಗೆ ವಿದೇಶಾಂಗ ಸಚಿವ ಕೊವಾನಾ ಮಾಶಾಬನೆ ಹಾಗೂ ಸಣ್ಣ ಕೈಗಾರಿಕೋದ್ಯಮ ಖಾತೆ ಸಚಿವೆ ಲಿಂಡಿವೆ ಜುಲು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು.
 
 
 
ಮೋದಿ ಅವರು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಜಾಕೋಬ್ ಜುಮಾ ಮತ್ತು ಉಪಾಧ್ಯಕ್ಷ ಸಿರಿಲ್ ರಮಾಪೊಸಾ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಆರ್ಥಿಕ ಪ್ರಗತಿಗೆ ಸಂಬಂಧಿಸಿದಂತೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮಾತುಕತೆ ನಡೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
 
 
 
ದ್ವಿಪಕ್ಷೀಯ ಮಾತುಕತೆ ಬಳಿಕ ಭಾರತ-ದಕ್ಷಿಣ ಆಫ್ರಿಕಾದ ಉದ್ಯಮಿಗಳ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ಬಳಿಕ ಪ್ರಧಾನಿ ಮೋದಿ ಜೋಹಾನ್ಸ್ ಬರ್ಗ್ ನಲ್ಲಿರುವ ಕಾನ್ಸ್ಟಿಟ್ಯೂಶನ್ ಹಿಲ್ ಹಾಗೂ ನೆಲ್ಸನ್ ಮಂಡೇಲಾ ಫೌಂಡೇಶನ್ ಗೆ ಭೇಟಿ ನೀಡುವ ಕಾರ್ಯಕ್ರಮಗಳು ನಿಗದಿಯಾಗಿವೆ. ದಿನದ ಅಂತ್ಯದಲ್ಲಿ ದಕ್ಷಿಣ ಆಫ್ರಿಕಾದ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಲಿದ್ದಾರೆ.

LEAVE A REPLY

Please enter your comment!
Please enter your name here