ಪ್ರೊ.ಜಿ.ವೆಂಕಟ ಸುಬ್ಬಯ್ಯ ಇನ್ನಿಲ್ಲ

0
454
ಸಾಹಿತಿ ವೆಂಕಟ ಸುಬ್ಬಯ್ಯ

ಕನ್ನಡ ನಿಘಂಟು ತಜ್ಞ ಖ್ಯಾತಿಯ ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ (೧೦೮) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿ. ವೆಂಕಟಸುಬ್ಬಯ್ಯ ಭಾನುವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಚಾಮರಾಜ ಪೇಟೆಯ ಚಿತಾಗಾರದಲ್ಲಿ ಮಧ್ಯಾಹ್ನ ೧೨.೩೦ಗೆ ಅಂತ್ಯಕ್ರೀಯೆ ನಡೆಯಲಿದೆ. ಜಯನಗರ ಅವರ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಜಿ.ವಿ. ಖ್ಯಾತಿ: ಕನ್ನಡ ಸಾರಸ್ವತ ಲೋಕದಲ್ಲಿ ಜಿವಿ ಎಂದೇ ಸುವಿಖ್ಯಾತರಾಗಿರುವ ಪ್ರೊ. ಜಿ. ವೆಂಕಟಸುಬ್ಬಯ್ಯ, ಅವರು ನಾಡಿನ ಖ್ಯಾತ ವಿದ್ವಾಂಸರು. ಜನಪ್ರಿಯ ಪ್ರಾಧ್ಯಾಪಕರಾಗಿ ಹೆಸರು ಗಳಿಸಿದ್ದರು. ೧೯೩೭ರಲ್ಲಿ ಮೈಸೂರು ಮಹಾರಾಜ ಕಾಲೇಜಿನಿಂದ ಎಂ.ಎ. ಪದವಿಯನ್ನು ಪಡೆದ ಇವರಿಗೆ ಪ್ರಥಮ ಸ್ಥಾನ ಪಡೆದಿದ್ದರು.
ಕನ್ನಡದ ನಿಘಂಟುಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಇವರ ಭಾಷಾ ಸಾಹಿತ್ಯ ಸಾಧನೆಗೆ ೨೦೦೫ರಲ್ಲಿ, ಹಂಪೆ ವಿಶ್ವವಿದ್ಯಾಲಯವು ಇವರಿಗೆ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನಿತ್ತು ಗೌರವಿಸಿದೆ.

LEAVE A REPLY

Please enter your comment!
Please enter your name here