ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

0
226

 
ಮ0ಗಳೂರು ಪ್ರತಿನಿಧಿ ವರದಿ
2015ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು.
 
 
 
ಸ್ವ-ವಿವರವುಳ್ಳ ಮನವಿಯೊಂದಿಗೆ ಧೃಡೀಕೃತ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ಧೃಡೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಜೂನ್ 30 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು -560002 ಇವರಿಗೆ ಕಳುಹಿಸಿ ಕೊಡಲು ತಿಳಿಸಿದ್ದಾರೆ.
 
 
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು ದೂರವಾಣಿ ಸಂಖ್ಯೆ: .080-22484516/ 22017704 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here