ಫೆಬ್ರವರಿ 28: ಬ್ಯಾಂಕ್ ಮುಷ್ಕರಕ್ಕೆ ಕರೆ

0
437

ನ್ಯೂಸ್ ಬ್ಯುರೋ ವಾರ್ತೆ.ಕಾಂ
ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಷ್ಟ್ರೀಕೃತ ಬ್ಯಾಂಕ್ ಗಳು ಮಂಗಳವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಇದರಿಂದಾಗಿ ಬಹುತೇಕ ಬ್ಯಾಂಕಿಂಗ್ ಸೇವೆಗಳು ಸ್ತಬ್ಧವಾಗಲಿದೆ. ಎ.ಟಿ.ಎಂ ಸೇವೆಗಳಲ್ಲೂ ವ್ಯತ್ಯಯ ಕಂಡುಬರಲಿದೆ. ಯು.ಎಫ್.ಬಿ.ಯು ವ್ಯಾಪ್ತಿಯ 9 ಬ್ಯಾಂಕ್ ಸಂಘಟನೆಗಳು ಈ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಹತ್ತು ಲಕ್ಷಕ್ಕೂ ಅಧಿಕ ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿಗಳು ಈ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ.
 
ಗ್ರ್ಯಾಚುಟಿ ಕಾಯ್ದೆಗೆ ತಿದ್ದುಪಡಿ ತರಬೇಕು, ಗ್ರ್ಯಾಚುಟಿ ಮೇಲಿನ ತೆರಿಗೆ ವಾಪಸ್,ಐಡಿಬಿಐ ಬ್ಯಾಂಕ್​ಗಳ ವೇತನ ಪರಿಷ್ಕರಣೆ, ಸ್ಟೇಟ್​​ ಬ್ಯಾಂಕ್ ಆಫ್ ಇಂಡಿಯಾ ಜತೆ ಸಹವರ್ತಿ ಬ್ಯಾಂಕ್​ಗಳ ವಿಲನಕ್ಕೆ ಖಂಡನೆ, ನೋಟ್​ ಬ್ಯಾನ್​​ ವೇಳೆ ಹೆಚ್ಚುವರಿ ಕೆಲಸಕ್ಕೆ ವಿಶೇಷ ಭತ್ಯೆಗೆ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸಲಾಗುತ್ತದೆ.
ಸ್ಟೇಟ್ ಬ್ಯಾಂಕ್ ಗ್ರೂಪ್, ಕಾಪೋರೇಷನ್ ಬ್ಯಾಂಕ್, ಕೆನರಾ ಬ್ಯಾಂಕ್, ಐಡಿಬಿಐ ಬ್ಯಾಂಕ್, ಎಸ್​ಬಿಐ, ಎಸ್​ಬಿಎಂ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಕರ್ನಾಟಕ ಬ್ಯಾಂಕ್ ಸೇರಿ ಎಲ್ಲ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹವರ್ತಿ ಬ್ಯಾಂಕ್​ಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿದೆ.

LEAVE A REPLY

Please enter your comment!
Please enter your name here