ಫೆ.1ರಿಂದ ಸಾಮಾನ್ಯ ಬಜೆಟ್ ಮಂಡನೆ

0
306

ರಾಷ್ಟ್ರೀಯ ಪ್ರತಿನಿಧಿ ವರದಿ
ಕೇಂದ್ರ ಸರ್ಕಾರ, ಫೆಬ್ರವರಿ 1ರಂದೇ 2017-18ನೇ ಸಾಲಿನ ಸಾಮಾನ್ಯ ಬಜೆಟ್ ಮಂಡಿಸಲಿದೆ. ಆದರೆ ಚುನಾವಣೆ ಇರುವ ಐದು ರಾಜ್ಯಗಳಿಗೆ ಬಜೆಟ್ ನಲ್ಲಿ ಯಾವುದೇ ಯೋಜನೆಗಳನ್ನು ಘೋಷಿಸುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ  ಸ್ಪಷ್ಟಪಡಿಸಿದೆ.
 
 
ಒಂದು ತಿಂಗಳು ಮುಂಚಿತವಾಗಿಯೇ ಬಜೆಟ್ ಮಂಡಿಸುವ ತನ್ನ ನಿರ್ಧಾರವನ್ನು ಆಯೋಗದ ಮುಂದೆ ಸಮರ್ಥಿಸಿಕೊಂಡಿರುವ ಸರ್ಕಾರ, ಏಪ್ರಿಲ್ 1ರಂದು ಹಣಕಾಸು ವರ್ಷದ ಮೊದಲ ದಿನದಿಂದಲೇ ಹೂಡಿಕೆಯ ಪ್ರಕ್ರಿಯೆ ಆರಂಭವಾಗಲಿ ಎಂಬ ಉದ್ದೇಶದಿಂದ ಫೆ.1ರಂದು ಬಜೆಟ್ ಮಂಡಿಸಲಾಗುತ್ತಿದೆ. ಆದರೆ ಈ ವೇಳೆ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಐದು ರಾಜ್ಯಗಳಿಗೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ಯಾವುದೇ ನಿರ್ದಿಷ್ಟ ಯೋಜನೆಗಳನ್ನು ಪ್ರಕಟಿಸುವುದಿಲ್ಲ ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ,

LEAVE A REPLY

Please enter your comment!
Please enter your name here