ಫೆ.20 ರಂದು ಬಿಜೆಪಿ ಪ್ರತಿಭಟನೆ

0
227

ವರದಿ: ಇಂದ್ರೇಶ್
ಕಾಂಗ್ರೆಸ್ ನೆೇತೃತ್ವದ ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವೈಫಲ್ಯತೆಯನ್ನು ಕಂಡಿದ್ದು, ಭ್ರಷ್ಟಾಚಾರ ಎಲ್ಲೆ ಮೀರಿದೆಯೆಂದು ಶಾಸಕ ಕೆ.ಜಿ. ಬೋಪಯ್ಯ ಆರೋಪಿಸಿದ್ದಾರೆ. ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರದ ವಿರುದ್ಧ ಫೆ. 20 ರಂದು ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಜಿ. ಬೋಪಯ್ಯ, ಏಳು ದಿನಗಳ ಕಾಲ ನಡೆದ ಅಧಿವೇಶನ ನಿಷ್ಪ್ರಯೋಜಕವಾಗಿದೆ ಎಂದು ಟೀಕಿಸಿದರು. ರಾಜ್ಯದ 160 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆಯಾದರು ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕೇಂದ್ರ ಸರ್ಕಾರದ ಬರ ಪರಿಹಾರದ ಅನುದಾನವನ್ನು ಕೂಡ ಸಮರ್ಪಕವಾಗಿ ಬಳಸಿಕೊಂಡಿಲ್ಲ. ಅಧಿಕಾರಿಗಳು ತಮ್ಮ ಮಾತು ಕೇಳುತ್ತಿಲ್ಲವೆಂದು ಸ್ವತಃ ಮುಖ್ಯಮಂತ್ರಿಗಳೇ ಅಸಹಾಯಕತೆ ವ್ಯಕ್ತಪಡಿಸಿದ್ದು, ಕೆಳ ಮಟ್ಟದಿಂದ ಮೇಲ್ಮಟ್ಟದವರೆಗೂ ಆಡಳಿತ ವ್ಯವಸ್ಥೆ ವೈಫಲ್ಯ ಹೊಂದಿರುವುದಕ್ಕೆ ಇದು ಸಾಕ್ಷಿಯಾಗಿದೆ ಮತ್ತು ಸರ್ಕಾರ ಆಡಳಿತದ ಮೇಲಿನ ಹಿಡಿತವನ್ನು ಸಂಪೂರ್ಣವಾಗಿ ಕಳೆದು ಕೊಂಡಿದೆ ಎಂದು ಕೆ.ಜಿ.ಬೋಪಯ್ಯ ಟೀಕಿಸಿದರು.
 
 
ಕಳೆದ ಬೆಳಗಾವಿ ಅಧಿವೇಶನದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಗಳಲ್ಲಿ ಅಂತರ್ಜಲ ಮಟ್ಟ ಗಣನೀಯ ಮಟ್ಟದಲ್ಲಿ ಕೆಲಕ್ಕಿಳಿದಿರುವುದಕ್ಕೆ ಅಕೇಶಿಯಾ ಮತ್ತು ನೀಲಗಿರಿ ಮರಗಳು ಕಾರಣವೆಂದು ಹಾಲಿ ಸಚಿವ ರಮೇಶ್ ಕುಮಾರ್ ವಿಷಯ ಪ್ರಸ್ತಾಪಿಸಿದ್ದರು. ಈ ಬಗ್ಗೆ ಚರ್ಚೆ ನಡೆದು ರಾಜ್ಯವ್ಯಾಪಿ ಅಕೇಶಿಯಾ ಮತ್ತು ನೀಲಗಿರಿ ಮರಗಳನ್ನು ಬೆಳೆಯಬಾರದೆಂದು ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿ, ಅಕೇಶಿಯ ಮತ್ತು ನೀಲಗಿರಿ ಮರಗಳನ್ನು ಬೆಳೆಸುವುದಕ್ಕೆ ಸುತ್ತೋಲೆ ಹೊರಡಿಸಿದ್ದಾರೆ. ಈ ಬಗ್ಗೆ ಈಗಿನ ವಿಧಾನ ಸಭಾ ಅಧಿವೇಶನದಲ್ಲಿ ತಾನು ಪ್ರಶ್ನಿಸಿದಾಗ ಎರಡು ದಿನಗಳಲ್ಲಿ ಅದನ್ನು ಹಿಂತೆಗೆದುಕೊಳ್ಳುವುದಾಗಿ ಸರ್ಕಾರ ಉತ್ತರಿಸಿತ್ತು. ಆದರೆ ಇಲ್ಲಿಯವರೆಗೆ ಸುತ್ತೋಲೆ ಹಿಂತೆಗೆದುಕೊಂಡಿಲ್ಲವೆಂದು ಬೇಸರ ವ್ಯಕ್ತಿಪಡಿಸಿದರು.
 
 
ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದ್ದು, ಉಳಿದ ಒಂದು ವರ್ಷವಾದರು ಉತ್ತಮ ಆಡಳಿತ ನೀಡಲಿ ಎಂದು ಬೋಪಯ್ಯ ವ್ಯಂಗ್ಯವಾಡಿದರು.
ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಮಾತನಾಡಿ, ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗ ಕಾಂಗ್ರೆಸ್ಸಿಗರ ನಡುವೆ ಕಿತ್ತಾಟ ಆರಂಭವಾಗಿದೆಯೆಂದು ಆರೋಪಿಸಿದರು. ಸರ್ಕಾರದ ದುರಾಡಳಿತಕ್ಕೆ ಎಸ್.ಎಂ.ಕೃಷ್ಣ ಅವರ ರಾಜೀನಾಮೆ, ಜನಾರ್ಧನ ಪೂಜಾರಿ ಹಾಗೂ ಹೆಚ್. ವಿಶ್ವನಾಥ್ ಅವರುಗಳ ಟೀಕೆಯೆ ಸಾಕ್ಷಿಯಾಗಿದೆಯೆಂದರು. ರಾಜ್ಯದ ಜನತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿದ್ದರು. ಆದರೆ, ಎಲ್ಲಾ ನಿರೀಕ್ಷೆಗಳು ಹುಸಿಯಾಗಿದೆಯೆಂದು ಅಸಮಾಧಾನ ವ್ಯಕ್ತಪಡಿಸಿದರು.
 
 
ನಂಜನಗೂಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್ಗ ಗೆ ಅಭ್ಯರ್ಥಿಯೇ ಇಲ್ಲದಾಗಿದ್ದು, ಜೆಡಿಎಸ್ ನ ವ್ಯಕ್ತಿಯನ್ನು ಕರೆತಂದು ಚುನಾವಣಾ ಕಣಕ್ಕಿಳಿಸಲಾಗಿದೆಯೆಂದು ಟೀಕಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್.ಜಿ.ಮೇದಪ್ಪ ಮಾತನಾಡಿ, ಸಿ ಅಂಡ್ ಡಿ ಭೂಮಿಗೆ ಸಂಬಂಧಿಸಿದಂತೆ ಇರುವ ಗೊಂದಲವನ್ನು ಸರಕಾರ ಇಂದಿಗೂ ನಿವಾರಿಸಿಲ್ಲವೆಂದು ಆರೋಪಿಸಿದರು. ನೀರಿನ ಕೊರತೆಯಿಂದಾಗಿ ಕಾಫಿ ಫಸಲಿಗೆ ಹಿನ್ನಡೆಯಾಗಿದ್ದು, ಕನಿಷ್ಠ ಕಾಫಿ ಗಿಡಗಳನ್ನು ಉಳಿಸಿಕೊಳ್ಳುವುದಕ್ಕಾದರು ಕೊಳವೆ ಬಾವಿಯನ್ನು ಕೊರೆಯಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಟೀಕಿಸಿದರು.

LEAVE A REPLY

Please enter your comment!
Please enter your name here