ಫೈರಿಂಗ್

0
412

 
ರಾಷ್ಟ್ರೀಯ ಪ್ರತಿನಿಧಿ ವರದಿ
ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆದಿದೆ. ಭದ್ರತಾ ಪಡೆ, ಉಗ್ರರ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದೆ.
 
 
ಇಲ್ಲಿನ ಲೋಲಾಬ್ ನಲ್ಲಿ ನಡೆದ ದಾಳಿಯಲ್ಲಿ ಭಾರತೀಯ ಸೇನೆ ಇಬ್ಬರನ್ನು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಲಷ್ಕರ್ ಸಂಘಟನೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.
 
 
ಲೋಲಬ್ ನಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ಸೇನೆ ಶೋಧ ಕಾರ್ಯ ನಡೆಸುತ್ತಿತ್ತು. ಈ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸೇನೆ ಸಹ ತಕ್ಕ ಪ್ರತ್ಯುತ್ತರ ನೀಡಿದೆ.
 
ಪ್ರಸ್ತುತ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಗುಂಡಿನ ಚಕಮಕಿ ಮುಂದುವರೆದಿದೆ. ಇನ್ನೂ ಹಲವು ಉಗ್ರರು ಅಡಗಿರುವ ಶಂಕೆ ಇದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here