ಫ್ಲೋರಿಡಾದಲ್ಲಿ ಗುಂಡಿನ ದಾಳಿ

0
287

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆದ ಘಟನೆ ಫ್ಲೋರಿಡಾದ ಫೋರ್ಟ್ ಲಾಡರ್ ಡೇಲ್ ನಲ್ಲಿ ನಡೆದಿದೆ. ದಾಳಿಯಲ್ಲಿ 9 ಮಂದಿ ಗಾಯಗೊಂಡು 5 ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗಾಯಗೊಂಡ 8 ಜನರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.
 
 
 
ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌’ಗಳನ್ನು ಇರಿಸುವ ಸ್ಥಳ ಟರ್ಮಿನಲ್ 2ರಲ್ಲಿ ಗುಂಡಿನ ದಾಳಿ ನಡೆದಿದೆ. ಈ ಘಟನೆ ಸಂಬಂಧ ಓರ್ವ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಂತಕನನ್ನು 26 ವರ್ಷದ ಎಸ್ಟೆಬಾನ್ ಸ್ಯಾಂಟಿಯಾಗೋ ಎಂದು ಗುರುತಿಸಲಾಗಿದೆ.
 
ಅಮೆರಿಕ ಶ್ವೇತಭವನದ ಮಾಜಿ ಪತ್ರಿಕಾ ಕಾರ್ಯದರ್ಶಿ ಈ ಬಗ್ಗೆ ಟ್ವೀಟ್ ಮಾಡಿದ್ದು, ನಾನು ವಿಮಾನ ನಿಲ್ದಾಣದಲ್ಲಿದ್ದೆ. ಈ ಸಂದರ್ಭದಲ್ಲಿ ಗುಂಡಿನ ದಾಳಿ ಆರಂಭಗೊಂಡಿತ್ತು. ಭಯಭೀತಗೊಂಡಿ ಎಲ್ಲರೂ ತಪ್ಪಿಸಿಕೊಳ್ಳುವ ಸಲುವಾಗಿ ಒಡಿದರು ಎಂದು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here