ಬಂದ್ ಗೆ ವ್ಯಾಪಕ ಬೆಂಬಲ

0
362

ಬೆಂಗಳೂರು ಪ್ರತಿನಿಧಿ ವರದಿ
ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪ್ರಮುಖ ಮಾರುಕಟ್ಟೆಗಳು ಸ್ಥಬ್ಧವಾಗಿವೆ. ಇನ್ನು ಬಂದ್ ಗೆ ಸರ್ಕಾರಿ ಸಾರಿಗೆ ಸಂಸ್ಥೆ ನೌಕರರು ಬೆಂಬಲ ವ್ಯಕ್ತಪಡಿಸಿರುವುದರಿಂದ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಬ್ದವಾಗಿದೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
 
ಕಾರು ಚಾಲಕನಿಗೆ ಆವಾಜ್
ಬಾಡಿಗೆ ಕಾರು ಓಡಿಸುತ್ತಿದ್ದ ಕಾರು ಚಾಲಕನಿಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಆವಾಜ್ ಹಾಕಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ನಡೆದಿದೆ. ಬಂದ್ ಗೆ ಬೆಂಬಲಿಸದೇ ಕಾರು ಓಡಿಸುತ್ತಿರುವುದಕ್ಕೆ ತರಾಟೆ ತೆಗೆದುಕೊಂಡಿದ್ದಾರೆ. ಕಾರ್ಯಕರ್ತರು ಕಾರು ಚಾಲಕನ ಮೇಲೆ ಹಲ್ಲೆಗೂ ಮುಂದಾಗಿದ್ದರು. ಬಳಿಕ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಚಾಲಕನನ್ನು ಸ್ಥಳದಿಂದ ಕಳುಹಿಸಿಕೊಟ್ಟಿದ್ದಾರೆ
 
ಬೆಂಗಳೂರು ರಿಂಗ್ ರೋಡ್ ನಲ್ಲಿ ಬಂದ್ ಮಾಡುತ್ತಿರುವ ದೃಶ್ಯ
ಬೆಂಗಳೂರು ರಿಂಗ್ ರೋಡ್ ನಲ್ಲಿ ಬಂದ್ ಮಾಡುತ್ತಿರುವ ದೃಶ್ಯ

ಮೈಸೂರು, ಮಂಡ್ಯ, ಬೆಂಗಳೂರು, ರಾಮನಗರ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ ಸೇರಿದಂತೆ ದಕ್ಷಿಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಬಂದ್ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.
 
ರೈಲು ತಡೆಗೆ ಮುಂದಾದವರ ಸೆರೆ
ಕಲಬುರಗಿಯಲ್ಲಿ ರೈಲು ತಡೆಗೆ ಮುಂದಾಗಿದ್ದವರನ್ನು ಬಂಧಿಸಲಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ಕನ್ನಡಪರ ಸಂಘಟನೆಯ 10ಕ್ಕೂ ಹೆಚ್ಚು ಕಾರ್ಯಕರ್ತರನ್ನು ರೇಲ್ವೆ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ.
ಕಾರ್ಯಕರ್ತರು ಉದ್ಯಾನ ಎಕ್ಸ ಪ್ರೆಸ್ ರೈಲು ತಡೆಯಲು ಮುಂದಾಗಿದ್ದರು. ಸ್ಟೇಷನ್ ಬಜಾರ್ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
 
ಕಾರು ಚಾಲಕನಿಗೆ ಆವಾಜ್
ಬಾಡಿಗೆ ಕಾರು ಓಡಿಸುತ್ತಿದ್ದ ಕಾರು ಚಾಲಕನಿಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಆವಾಜ್ ಹಾಕಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ನಡೆದಿದೆ. ಬಂದ್ ಗೆ ಬೆಂಬಲಿಸದೇ ಕಾರು ಓಡಿಸುತ್ತಿರುವುದಕ್ಕೆ ತರಾಟೆ ತೆಗೆದುಕೊಂಡಿದ್ದಾರೆ. ಕಾರ್ಯಕರ್ತರು ಕಾರು ಚಾಲಕನ ಮೇಲೆ ಹಲ್ಲೆಗೂ ಮುಂದಾಗಿದ್ದರು. ಬಳಿಕ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಚಾಲಕನನ್ನು ಸ್ಥಳದಿಂದ ಕಳುಹಿಸಿಕೊಟ್ಟಿದ್ದಾರೆ

LEAVE A REPLY

Please enter your comment!
Please enter your name here