ಬಂದ್ ಗೆ ಸರಕಾರದಿಂದ ಪರೋಕ್ಷ ಬೆಂಬಲ

0
450

ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ರಜೆ-ಸರ್ಕಾರಿ ಬಸ್ ಇಲ್ಲ
ನಮ್ಮ ಪ್ರತಿನಿಧಿ ವರದಿ
ಕರ್ನಾಟಕ ಬಂದ್ ಗೆ ಸರಕಾರ ಪರೋಕ್ಷ ಬೆಂಬಲ ನೀಡಿದೆ. ಎಲ್ಲಾ ಸರಕಾರೀ ಸಂಸ್ಥೆಗಳೂ, ಶಿಕ್ಷಣ ಸಂಸ್ಥೆಗಳು ನಾಳೆ ಕಾರ್ಯ ನಿರ್ವಹಿಸುವುದಿಲ್ಲ. ರಾಜ್ಯ ಸರಕಾರಿ ಕಚೇರಿಗಳಲ್ಲೂ ನಾಳೆ ಅಟೆಂಡೆನ್ಸ್ ಇರುವುದಿಲ್ಲ  ಎಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಆದ್ಯ ಕರ್ತವ್ಯ. ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲೂ ಎಚ್ಚರಿಕೆ ಅಗತ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ. ಅವಕಾಶವನ್ನು ದುರುಪಯೋಗ ಪಡಿಸಿಕೊಳ್ಳಬೇಡಿ ಎಂದು ಮುಖ್ಯಮಂತ್ರಿಗಳು ಸೂಕ್ಷ್ಮವಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here