ಬಡ್ತಿ ಮೀಸಲಾತಿ ವಿಚಾರ ಸಂಕಿರಣ

0
456

ಮಡಿಕೇರಿ ಪ್ರತಿನಿಧಿ ವರದಿ
ರಾಷ್ಟ್ರದಲ್ಲಿ ಹೆಸರಿಗೆ ಮಾತ್ರ ಪ್ರಜಾಪ್ರಭುತ್ವವಿದ್ದು, ವಾಸ್ತವವಾಗಿ ಅಸ್ತಿತ್ವದಲ್ಲಿಲ್ಲವೆಂದು ಅಂಬೇಡ್ಕರ್ ವಿಚಾರವಾದಿ ಹಾಗೂ ಬಹುಜನ ವಿದ್ಯಾರ್ಥಿ ಸಂಘದ ಸಂಯೋಜಕ ಡಾ. ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.
 
 
ಬಹುಜನ ವಿದ್ಯಾರ್ಥಿ ಸಂಘದ ವತಿಯಿಂದ ನಗರದ ಬಾಲಭವನದಲ್ಲಿ ನಡೆದ ಬಡ್ತಿ ಮೀಸಲಾತಿ ಕುರಿತು ವಿಚಾರ ಸಂಕಿರಣ ಮತ್ತು ಸಾಮಾನ್ಯ ಜ್ಞಾನ ಸ್ಪರ್ಧಾ ವಿಜೇತರಿಗೆ ಬಹುಮಾನ ವಿರತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನರ ಅಭಿಪ್ರಾಯಗಳಿಗೆ ಗೌರವ ನೀಡುವುದು ಪ್ರಜಾಪ್ರಭುತ್ವದ ಮೂಲ ತತ್ವ. ಆದರೆ ವಾಸ್ತವವೆಂದರೆ ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಿನ ಜನತೆ ಹೋದರೂ ಸೂಕ್ತ ಸೌಲಭ್ಯಗಳು ದೊರಕುತ್ತಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿದೆ. ಅದೇ ರೀತಿ ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಹೆಚ್ಚು ಸಂಖ್ಯೆಯಲ್ಲಿರುವ ಮಾಂಸಹಾರಿಗಳು ಅಪರಾಧಿಗಳಂತೆ ಬದುಕಬೇಕಾಗಿದೆ. ಇದನ್ನು ಪ್ರಜಾಪ್ರಭುತ್ವ ಎನ್ನಲು ಸಾಧ್ಯವಿಲ್ಲ. ರಾಷ್ಟ್ರದಲ್ಲಿ ಹೆಸರಿಗೆ ಮಾತ್ರ ಪ್ರಜಾಪ್ರಭುತ್ವವಿದ್ದು, ವಾಸ್ತವವಾಗಿ ಅಸ್ತಿತ್ವದಲ್ಲಿಲ್ಲ ಡಾ.ಶಿವಕುಮಾರ್ ಆರೋಪಿಸಿದರು.
 
 
ಪ್ರಜಾಪ್ರಭುತ್ವ ವ್ಯವಸ್ಥೆ 1956ರ ಬಳಿಕ ದೇಶದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಅದಕ್ಕಿಂತಲೂ ಹಿಂದೆ ರಾಜಪ್ರಭುತ್ವ ಜಾರಿಯಲ್ಲಿತ್ತು. ಆ ಸಂದರ್ಭದಲ್ಲಿ ಪ್ರಥಮ ಬಾರಿಗೆ ಮಹಾತ್ಮ ಜ್ಯೋತಿ ಬಾಪುಲೆ ಮತ್ತು ಸಾವಿತ್ರಿ ಬಾಪುಲೆ ಎಲ್ಲರಿಗೂ ಶಿಕ್ಷಣ ದೊರಕಬೇಕೆಂಬ ಉದ್ದೇಶದೊಂದಿಗೆ ಪ್ರಜಾಪ್ರಭುತ್ವಕ್ಕಾಗಿ ಹೋರಾಟ ನಡೆಸಿದ್ದರು ಎಂದು ಅವರು ಸ್ಮರಿಸಿದರು.
 
 
ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ನಿರ್ದೇಶಕ ಮುರುಳೀಧರ್, ಮೈಸೂರು ಖಾಸಗಿ ದೂರವಾಣಿ ಸಂಸ್ಥೆಯ ಇಂಜಿನಿಯರ್ ಶಿವಪ್ರಸಾದ್, ಪ್ರಮುಖರಾದ ಅನಿಲ್ ಕುಮಾರ್, ಗೌರಿ, ಬಾಲನ್, ಸೋಮಣ್ಣ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭ ಸಾಮಾನ್ಯ ಜ್ಞಾನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

LEAVE A REPLY

Please enter your comment!
Please enter your name here