ಬಸ್ ಪಲ್ಟಿ: ಮಹಿಳೆ ಸಾವು

0
176

ಬೆಂಗಳೂರು ಪ್ರತಿನಿಧಿ ವರದಿ
ನೌಕರರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಬೊಮ್ಮನಹಳ್ಳಿ ಸಮೀಪ ನಡೆದಿದೆ.
 
 
 
ಗಾರ್ಮೆಂಟ್ಸ್ ಉದ್ಯೋಗಿ ಕಮಲಮ್ಮ(30) ದುರ್ಮರಣ ಹೊಂದಿದ್ದ ಮಹಿಳೆಯಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
 
 
ಚಾಲಕನ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

LEAVE A REPLY

Please enter your comment!
Please enter your name here