ಬಸ್ ಮುಷ್ಕರ

0
396

 
ಬೆಂಗಳೂರು ಪ್ರತಿನಿಧಿ ವರದಿ
ವೇತನ ಹೆಚ್ಚಳಕ್ಕೆ ಸಾರಿಗೆ ಬಸ್ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಸಾರಿಗೆ ಬಸ್ ಗಳ ಸಂಚಾರವನ್ನು ಬಂದ್ ಮಾಡಲಾಗಿದೆ.
ಬೆಳಗಿನಿಂದ ಯಾವುದೇ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯಲಿಲ್ಲ. ಇದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ.
 
 
ಶಾಲಾ-ಕಾಲೇಜುಗಳಿಗೆ ರಜೆ
ಸಾರಿಗೆ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಿಸಿದ್ದಾರೆ.
ವಿವಿಧ ಬೇಡಿಕೆಗೆ ಈಡೇಕರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕಕರು ಭಾನುವಾರ ಮಧ್ಯರಾತ್ರಿಯಿಂದ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಸೋಮವಾರ, ಮಂಗಳವಾರ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.
 
 
 
ಬೆಂಗಳೂರು ನಗರ,ಗ್ರಾಮಾಂತರ, ಧಾರವಾಡ, ಬಳ್ಳಾರಿ, ಬೀದರ್​, ಕಲಬುರಗಿ, ಚಿತ್ರದುರ್ಗ, ಮಂಡ್ಯ, ರಾಮನಗರ, ದಾವಣಗೆರೆ, ಚಿಕ್ಕಬಳ್ಳಾಪುರ, ಹಾವೇರಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಯಾದಗಿರಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗ ರಜೆ ಘೋಷಿಸಲಾಗಿದೆ. ಚಾಮರಾಜನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ.

LEAVE A REPLY

Please enter your comment!
Please enter your name here