ಬಾಂಬ್ ಮಾದರಿ ವಸ್ತು ಪತ್ತೆ

0
537

ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಬಾಂಬ್ ಮಾದರಿ ವಸ್ತು ಪತ್ತೆಯಾಗಿದೆ. ಮೆಟ್ರೋ ನಿಲ್ದಾಣದ ಪಕ್ಕದಲ್ಲೇ ಪತ್ತೆಯಾಗಿದೆ. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ನಿರ್ಮಾಣ ಹಂತದ ಮೆಟ್ರೋ ನಿಲ್ದಾಣದಲ್ಲಿ ಪತ್ತೆಯಾಗಿದೆ. ಜಯನಗರ ಬಳಿಯ ಲಾಲ್ ಭಾಗ್ ನ ವೆಸ್ಟ್ ಗೇಟ್ ನಿಲ್ದಾಣದ ಬಳಿ ಟಿಫಿನ್ ಬಾಕ್ಸ್ ನಲ್ಲಿ ಪತ್ತೆಯಾಗಿದ್ದು, ಪಟಾಕಿ ಮಾದರಿ ವಸ್ತುಗೆ ದಾರ ಸುತ್ತಿಟ್ಟು ಫಿಕ್ಸ್ ಮಾಡಲಾಗಿತ್ತು.
 
 
ಅಪರಿಚಿತ ವ್ಯಕ್ತಿಯೊಬ್ಬ ಕಾಯಿನ್ ಬಾಕ್ಸ್ ನಿಂದ 100ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಕರೆ ಮಾಡಿರುವ ವ್ಯಕ್ತಿಗಾಗಿ ಪೊಲೀಸರು ಹುಡುಗಾಟ ನಡೆಸುತ್ತಿದ್ದಾರೆ.
 
 
ಜ.26ರಂದು ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆದರಿಸಲು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ.ಮೆಟ್ರೋ ನಿಲ್ದಾಣದ ಭದ್ರತಾ ಸಿಬ್ಬಂದಿಯನ್ನು ವಿಚಾರಿಸಲಾಗಿದೆ. ಸದ್ಯ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here