ಬಾಬ್ರಿ ಮಸೀದಿ ಪರ ಹೋರಾಟಗಾರ ಅನ್ಸಾರಿ ನಿಧನ

0
172

 
ವರದಿ: ಲೇಖಾ
ರಾಮ ಜನ್ಮಭೂಮಿ ಬಾಬ್ರಿ ಮಸೀದಿ ವಿವಾದದ ಅತ್ಯಂತ ಹಿರಿಯ ಕಕ್ಷಿದಾರ ಮೊಹಮದ್ ಹಸೀಮ್ ಅನ್ಸಾರಿ ಅವರು ಇಂದು ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾಗಿದ್ದಾರೆ.
 
 
ಅನ್ಸಾರಿ ಅವರಿಗೆ 96 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ವಿಧಿವಶರಾದರು ಎಂದು ಅವರ ಪುತ್ರ ಇಕ್ಬಾಲ್ ತಿಳಿಸಿದ್ದಾರೆ.
 
 
1949ರಿಂದಲೇ ಬಾಬ್ರಿ ಮಸೀದಿ ಪರವಾಗಿ ಹೋರಾಟ ನಡೆಸುತ್ತಿದ್ದ ಹಸೀಮ್ ಅನ್ಸಾರಿ, ಇದನ್ನು ರಾಜಕೀಯವಾಗಿ ಬಳಸಿಕೊಂಡಿದ್ದಕ್ಕಾಗಿ ತೀವ್ರ ಅಸಮದಾನ ವ್ಯಕ್ತಪಡಿಸಿದ್ದರು. ಬಾಬ್ರಿ ಮಸೀದಿ-ರಾಮ ಜನ್ಮಭೂಮಿ ವಿವಾದದ ವಿರುದ್ಧ ಮೊದಲ ಬಾರಿಗೆ ಫೈಜಾಬಾದ್ ನ್ಯಾಯಾಲಯದ ಮೆಟ್ಟಿಲೇರಿದ ಹಸೀಮ್ ಈ ವಿಚಾರವಾಗಿ ಸಾಕಷ್ಟು ಹೋರಾಟ ನಡೆಸಿದ್ದರು.

LEAVE A REPLY

Please enter your comment!
Please enter your name here