ಬಾಲಕರ ವಿಭಾಗದಲ್ಲಿ ಆಳ್ವಾಸ್, ಮಹಿಳೆಯರ ವಿಭಾಗದಲ್ಲಿ ಎಸ್.ಡಿ.ಎಂ.

0
463

ನಮ್ಮ ಪ್ರತಿನಿಧಿ ವರದಿ
ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ರೋಟರಿ ಪದವಿಪೂರ್ವ ಕಾಲೇಜು ಮೂಡಬಿದಿರೆ ಇದರ ಸಹಯೋಗದೊಂದಿಗೆ ಪದವಿಪೂರ್ವ ಕಾಲೇಜುಗಳ ಪುರುಷರ ಮತ್ತು ಮಹಿಳೆಯರ ದ.ಕ.ಜಿಲ್ಲಾಮಟ್ಟದ ವಾಲೀಬಾಲ್ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಆಳ್ವಾಸ್ ಮೂಡಬಿದಿರೆ ಹಾಗೂ ಬಾಲಕಿಯರ ವಿಭಾಗದಲ್ಲಿ ಎಸ್.ಡಿ.ಎಂ ಪದವಿಪೂರ್ವ ಕಾಲೇಜು ಬೆಳ್ತಂಗಡಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾದರು. ದ್ವಿತೀಯ ಸ್ಥಾನದಲ್ಲಿ ಬಾಲಕರ ವಿಭಾಗದಲ್ಲಿ ಮಂಗಳೂರು ನಗರವನ್ನು ಪ್ರತಿನಿಧಿಸಿದ ವಿಕಾಸ್ ಕಾಲೇಜು ಹಾಗೂ ಬಾಲಕಿಯರ ವಿಭಾಗದಲ್ಲಿ ಮಂಗಳೂರು ಗ್ರಾಮಾಂತರದ ಆಳ್ವಾಸ್ ಪದವಿ ಕಾಲೇಜು ಪಡೆದುಕೊಂಡಿತು.
ಬಾಲಕರ ವಿಭಾಗದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಶಿವು ಬೆಸ್ಟ್ ಅಟೇಕರ್ ಆಗಿ ಹೊರಹೊಮ್ಮಿದರು. ಬೆಸ್ಟ್ ಪಾಸರ್ ಆಗಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಧುನುಷ್ ಹಾಗೂ ಬೆಸ್ಟ್ ಆಲ್ ರೌಂಡರ್ ಆಗಿ ಮಂಗಳೂರು ನಗರದ ಮಾನಸ್ ಎಮ್ ಆಯ್ಕೆಯಾದರು. ಮಹಿಳೆಯರ ವಿಭಾಗದಲ್ಲಿ ಬೆಸ್ಟ್ ಪಾಸರ್ ಆಗಿ ಎಸ್ ಡಿ ಎಂ ಕಾಲೇಜಿನ ಯಶೋಧ, ಬೆಸ್ಟ್ ಅಟೇಕರ್ ಆಗಿ ಎಸ್.ಡಿ.ಎಂ ಕಾಲೇಜಿನ ಸಾಲಿಯತ್, ಬೆಸ್ಟ್ ಆಲ್ ರೌಂಡರ್ ಆಗಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿ ಆಯ್ಕೆಯಾದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ಮೊಹಮ್ಮದ್ ಶರೀಫ್ ವಹಿಸಿದ್ದರು. ಉದ್ಯಮಿಗಳಾದ ಅಶ್ವಿನ್ ಪಿರೇರಾ, ರೋಹನ್ ರಾಜೇಶ್ ಮೆಂಡಿಸ್, ಎಸ್.ಡಿ.ಎಂ ಉಪ ಪ್ರಾಂಶುಪಾಲ ಎಂ.ಡಿ.ಚೌಟ, ಗುರುರಾಜ್ ಹೆಗ್ಡೆ ವೇದಿಕೆಯಲ್ಲಿದ್ದರು.
ರೋಟರಿ ಪ್ರಾಂಶುಪಾಲ ವಿನ್ಸೆಂಟ್ ಡಿ’ಕೋಸ್ತ ಸ್ವಾಗತಿಸಿದರು. ದೈಹಿಕ ನಿರ್ದೇಶಕ ಸುಧೀರ್ ಕುಮಾರ್ ವಿಜೇತರ ಪಟ್ಟಿ ವಾಚಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಶುಭಕರ್ ಅಂಚನ್ ವಂದಿಸಿದರು. ಸತೀಶ್ಚಂದ್ರ ಚಿತ್ರಾಪು ನಿರೂಪಿಸಿದರು.

LEAVE A REPLY

Please enter your comment!
Please enter your name here