ಬಿಜೆಪಿ ಸಂತಾಪ

0
515

 
ಮಂಗಳೂರು ಪ್ರತಿನಿಧಿ ವರದಿ
ಕೊಲ್ಯದ ಶ್ರೀ ಶ್ರೀ ಶ್ರೀ ರಮಾನಂದ ಸ್ವಾಮೀಜಿಯವರು ದೈವಧೀನರಾಗಿದ್ದು, ಸ್ವಾಮೀಜಿಯವರ ಅಗಲುವಿಕೆಯಿಂದ ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.
 
 
ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ನಿರ್ಗತಿಕರಿಗೆ ಸಹಾಯ ಹಸ್ತವನ್ನು ಮಾಡಿದ್ದಾರೆ. ಹಿಂದೂ ಸಮಾಜದ ಹಾಗೂ ಧೀನದಲಿತರ ಅಭಿವೃದ್ಧಿಗೆ ಶ್ರಮಿಸಿ, ರಾಮ ಮಂದಿರ ಮತ್ತು ಗೋಹತ್ಯಾ ನಿಷೇಧ ಚಳುವಳಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಸ್ವಾಮೀಜಿಯವರ ಅಂತಿಮ ದರ್ಶನ ಮಾಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
 
 
 
ಜಿಲ್ಲಾಧ್ಯಕ್ಷರಾದ ಕೆ.ಪ್ರತಾಪ್ ಸಿಂಹ ನಾಯಕ್, ಮಾಜಿ ಸಚಿವರಾದ ಕೃಷ್ಣ ಪಾಲೆಮಾರ್, ನಾಗರಾಜ್ ಶೆಟ್ಟಿ, ವಿ.ಪ.ಸದಸ್ಯರಾದ ಕ್ಯಾ.ಗಣೇಶ್ ಕಾರ್ಣಿಕ್, ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಶಾಸಕರಾದ ಯೋಗೀಶ್ ಭಟ್, ಪದ್ಮನಾಭ ಕೊಟ್ಟಾರಿ, ಜಯರಾಮ್ ಶೆಟ್ಟಿ, ರುಕ್ಮಯ್ಯ ಪೂಜಾರಿ, ಮೋನಪ್ಪ ಭಂಡಾರಿ, ಮುಂತಾದವರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here