ಬಿಸಿಸಿಐನ 34ನೇ ಅಧ್ಯಕ್ಷರಾಗಿ ಠಾಕೂರ್

0
549

 
ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ 34ನೇ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವರು ಭಾನುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
 
 
ಮುಂಬೈಯಲ್ಲಿ ನಡೆದ ಬಿಸಿಸಿಐನ ವಿಶೇಷ ಮಹಾಸಭೆ(ಎಸ್‌ಜಿಎಂ)ಯಲ್ಲಿ ಬಿಸಿಸಿಐ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಐಸಿಸಿ ಅಧ್ಯಕ್ಷ ಶಶಾಂಕ್ ಮನೋಹರ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಿಸಿಸಿಐ ಕಾರ್ಯದರ್ಶಿಯಾಗಿದ್ದ ಅನುರಾಗ್ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ.
 
 
 
41ನೇ ವಯಸ್ಸಿನ ಅನುರಾಗ್ ಬಿಸಿಸಿಐನ 2ನೇ ಅತಿಕಿರಿಯ ಅಧ್ಯಕ್ಷರೆಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಈ ಹಿಂದೆ ಠಾಖೂರ್ ಅವರು ಬಿಸಿಸಿಐನ ಮಾಜಿ ಕಾರ್ಯದರ್ಶಿಯಾಗಿದ್ದರು.
 
 
 
 
ಬಿಜೆಪಿ ಸಂಸದರಾಗಿರುವ ಅನುರಾಗ್ ಠಾಕೂರ್ ಅವರಿಗೆ ಪೂರ್ವವಲಯ ಸದಸ್ಯ ರಾಜ್ಯಗಳಾದ ಬಂಗಾಳ, ಅಸ್ಸಾಂ, ಜಾರ್ಖಂಡ್, ತ್ರಿಪುರಾ ಹಾಗೂ ನ್ಯಾಷನಲ್ ಕ್ರಿಕೆಟ್ ಕ್ಲಬ್ ಸಂಪೂರ್ಣ ಬೆಂಬಲ ನೀಡಿವೆ. ಆದರೆ ಪೂರ್ವ ವಲಯದ ಆರೂ ಕ್ರಿಕೆಟ್‌ ಸಂಸ್ಥೆಗಳು ಅನುರಾಗ್‌ ಅವರನ್ನು ಬೆಂಬಲಿಸಿರುವ ಕಾರಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
 
 
ಈ ಮೊದಲು ಅಧ್ಯಕ್ಷ ಹುದ್ದೆ ಯಲ್ಲಿದ್ದ ಶಶಾಂಕ್‌ ಮನೋಹರ್‌ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ನ ಮುಖ್ಯಸ್ಥರಾಗಿ ಸ್ವತಂತ್ರ ವಾಗಿ ಸ್ವರ್ಧಿಸಿ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರು ಈ ತಿಂಗಳ ಆರಂಭದಲ್ಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

LEAVE A REPLY

Please enter your comment!
Please enter your name here