ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಠಾಕೂರ್ ವಜಾ

0
503

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಅನುರಾಗ್ ಠಾಕೂರ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನ್ಯಾ.ಲೋಧಾ ಸಮಿತಿ ವರದಿ ಆಧರಿಸಿ ಸುಪ್ರೀಂ ಮಹತ್ವದ ತೀರ್ಪು ನೀಡಿದೆ. ಇದರಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಭಾರೀ ಹಿನ್ನೆಡೆಯಾಗಿದೆ.
 
 
 
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸಿದ್ದ ನ್ಯಾ.ಲೋಧಾ ಸಮಿತಿ ನೀಡಿದ್ದ ಶಿಫಾರಸ್ಸುಗಳನ್ನು ಜಾರಿ ಮಾಡದ ಹಿನ್ನಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಹಾಗೂ ಬಿಸಿಸಿಐ ಕಾರ್ಯದರ್ಶಿ ಅಜಯ್ ಶಿರ್ಕೆ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸಲಾಗಿದೆ. ಇದರಿಂದ ಅನುರಾಗ್ ಠಾಕೂರ್ ಮತ್ತು ಅಜಯ್ ಶಿರ್ಕೆ ಶೋಕಾಸ್ ನೋಟಿಸ್ ನೀಡಲಾಗಿದೆ.
 
 
 
ಅಂತೆಯೇ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಬಿಸಿಸಿಐ ಉಪಾಧ್ಯಕ್ಷರನ್ನು ಹಂಗಾಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ.
 
70 ವರ್ಷ ದಾಟಿದ್ರೆ ಗೇಟ್ ಪಾಸ್
70 ವರ್ಷ ದಾಟಿರುವ ಬಿಸಿಸಿಐನ ಎಲ್ಲಾ ಪದಾಧಿಕಾರಗಳನ್ನೂ ವಜಾ ಮಾಡಲಾಗಿದೆ. 9 ವರ್ಷಕ್ಕೂ ಹೆಚ್ಚು ಕೆಲಸ ಮಾಡಿರುವ ಸದಸ್ಯರೂ ವಜಾಗೊಂಡಿದ್ದಾರೆ. ಬಿಸಿಸಿಐನ ಎಲ್ಲಾ ತಪ್ಪಿತಸ್ಥ ಪದಾಧಿಕಾರಿಗಳೂ ಸಹವ ವಜಾವಾಗಿದ್ದಾರೆ. ಜನವರಿ 19ರೊಳಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡುವಂತೆ ಸುಪ್ರೀಂ ಆದೇಶಿಸಿದೆ.

LEAVE A REPLY

Please enter your comment!
Please enter your name here