ಬೆಳ್ಳಿಹೆಜ್ಜೆಯಲ್ಲಿ ಈ ಬಾರಿ ಹೆಚ್.ಡಿ. ಗಂಗರಾಜು

0
307

 
ವರದಿ: ಲೇಖಾ
ಕರ್ನಾಟಕ ಚಲನಚಿತ್ರ ಅಕಾಡೆಮಿಯು ಜುಲೈ 25 ನೇ ಸೋಮವಾರದಂದು ಸಂಜೆ 5-00 ಗಂಟೆಗೆ ಬೆಂಗಳೂರು ಮಿಲ್ಲರ್ಸ್ ರಸ್ತೆಯ ಚಾಮುಂಡೇಶ್ವರಿ ಸ್ಟುಡಿಯೋಸ್‍ನಲ್ಲಿ ಹಿರಿಯ ಚಿತ್ರ ನಿರ್ಮಾಪಕ, ವಿತರಕ ಹಾಗೂ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಹೆಚ್. ಡಿ. ಗಂಗರಾಜು ಅವರೊಂದಿಗೆ ’ಬೆಳ್ಳಿಹೆಜ್ಜೆ’ ಕಾರ್ಯಕ್ರಮವನ್ನು ಏರ್ಪಡಿಸಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ಹೆಚ್.ಬಿ. ದಿನೇಶ್ ತಿಳಿಸಿದ್ದಾರೆ.
 
 
 
ಬೆಳ್ಳಿಹೆಜ್ಜೆಯ ಸಂವಾದ ನಿರ್ವಹಣೆಯನ್ನು ಚಿತ್ರರಂಗದ ಹಿರಿಯ ಕಲಾವಿದ ಎಂ. ಕೆ. ಸುಂದರರಾಜ್ ನಡೆಸಿಕೊಡುವರು. ಮುಖ್ಯ ಅತಿಥಿಗಳಾಗಿ ಹಿರಿಯ ಕಲಾವಿದೆ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಜಯಮಾಲ, ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್. ಆರ್. ವಿಶುಕುಮಾರ್, ಹಿರಿಯ ಚಿತ್ರ ನಿರ್ದೆಶಕ ಎಸ್.ಕೆ. ಭಗವಾನ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ. ಗೋವಿಂದು ಹಾಗೂ ಹಿರಿಯ ಚಲನಚಿತ್ರ ನಿರ್ದೇಶಕ ನಾಗಣ್ಣ ಪಾಲ್ಗೊಳ್ಳುವರು.
 
 
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ. ರಾಜೇಂದ್ರಸಿಂಗ್ ಬಾಬು ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here