“ಬೆಳ್ಳಿಹೆಜ್ಜೆ” ಯಲ್ಲಿ ನಟಿ ಸುಧಾರಾಣಿ

0
519

 
ಬೆಂಗಳೂರು ಪ್ರತಿನಿಧಿ ವರದಿ
ಕರ್ನಾಟಕ ಚಲನಚಿತ್ರ ಅಕಾಡೆಮಿಯು ಜುಲೈ 2 ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಕುಮಾರಪಾರ್ಕ್ ರಸ್ತೆಯಲ್ಲಿರುವ ಗಾಂಧೀಭವನದ ಮಹದೇವ ದೇಸಾಯಿ ಸಭಾಂಗಣಲ್ಲಿ ಕನ್ನಡ ಚಲನಚಿತ್ರರಂಗದ ಖ್ಯಾತ ತಾರೆ ಧಾರಾಣಿ ಅವರ “ಬೆಳ್ಳಿಹೆಜ್ಜೆ” ಕಾರ್ಯಕ್ರಮವನ್ನು ಏರ್ಪಡಿಸಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ಹೆಚ್.ಬಿ. ದಿನೇಶ್ ತಿಳಿಸಿದ್ದಾರೆ.
 
 
ಕರ್ನಾಟಕ ಚಲನಚಿತ್ರ ಅಕಾಡೆಮಿ ಮಾಜಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್. ಆರ್. ವಿಶುಕುಮಾರ್, ಕನ್ನಡ ಚಲನಚಿತ್ರರಂಗದ ಹಿರಿಯ ನಿರ್ದೇಶಕ ಎಸ್. ಕೆ. ಭಗವಾನ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ. ರಾ. ಗೋವಿಂದು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಎಸ್.ವಿ. ರಾಜೇಂದ್ರಸಿಂಗ್ ಬಾಬು ಸಮಾರಂಭದ ಅಧ್ಯಕ್ಷತೆ ವಹಿಸುವರು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here